# ಕರಾವಳಿ ಕಂಬಳ ಆಯೋಜಕರಿಗೆ ಸಿಹಿ ಸುದ್ದಿ-ಅನುದಾನ ಘೋಷಣೆ

- Link: https://hosakannada.com/news/good-news-for-coastal-kambala-organizers-grant-announced/
- Published: 2026-07-17T18:08:38+00:00
- Author: ಹೊಸಕನ್ನಡ ನ್ಯೂಸ್

ರಾಜ್ಯ ಸರಕಾರ ಕಂಬಳ ಆಯೋಜಕರಿಗೆ ಸಿಹಿ ಸುದ್ದಿಯನ್ನು ನೀಡಿದೆ. 2025-26ನೇ ಸಾಲಿನ ಕರಾವಳಿಯಲ್ಲಿ 
ನಡೆಯುವ 23 ಕಂಬಳಗಳಿಗೆ ತಲಾ ರೂ.5 ಲಕ್ಷ ರಂತೆ ಒಟ್ಟು 1 ಕೋಟಿ 15 ಲಕ್ಷ ರೂ. ಅನುದಾನ ಘೋಷಣೆ ಮಾಡಿದೆ.
ಪ್ರವಾಸೋದ್ಯಮ ಇಲಾಖೆಯಿಂದ ಅನುದಾನ ಬಿಡುಗಡೆ ಮಾಡಲಾಗಿದ್ದು, ಸರಕಾರದ ಈ ನಿರ್ಧಾರವನ್ನು ಕಂಬಳ ಸಂಘಟಕರು
ಸ್ವಾಗತಿಸಿದ್ದಾರೆ.

Sponsored

ಈ ಕುರಿತು ಪ್ರತಿಕ್ರಿಯೆ ನೀಡಿರುವ ರಾಜ್ಯ ಕಂಬಳ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್‌ ಶೆಟ್ಟಿ, ರಾಜ್ಯ
ಸರಕಾರ ನುಡಿದಂತೆ ನಡೆದಿದೆ. ಸಿಎಂ ಡಿಕೆ ಶಿವಕುಮಾರ್‌ ಕಂಬಳ ಆಯೋಜಕರಿಗೆ ಸಿಹಿ ಸುದ್ದಿ ನೀಡಿದ್ದಾರೆ.
ಪ್ರತಿ ಕಂಬಳಕ್ಕೂ 5 ಲಕ್ಷ ರೂ ಅನುದಾನ ಕೊಟ್ಟಿದ್ದಾರೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ 
23 ಕಂಬಳಗಳಿಗೆ ಇದರಿಂದ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.

Advertisement

Advertisement

 

Advertisement
