Home latest ರೈತರೇ ಗಮನಿಸಿ | ಸೌರ ಚಾಲಿತ ಕೃಷಿ ಪಂಪ್ ಸೆಟ್ ಗೆ ಅರ್ಜಿ ಆಹ್ವಾನ

ರೈತರೇ ಗಮನಿಸಿ | ಸೌರ ಚಾಲಿತ ಕೃಷಿ ಪಂಪ್ ಸೆಟ್ ಗೆ ಅರ್ಜಿ ಆಹ್ವಾನ

Hindu neighbor gifts plot of land

Hindu neighbour gifts land to Muslim journalist

ಕೃಷಿಯನ್ನು ನೆಚ್ಚಿಕೊಂಡಿರುವ ರೈತ ಸಮುದಾಯಕ್ಕೆ ಸಿಹಿ ಸುದ್ದಿಯೊಂದು ಕಾದಿದೆ.ಹೌದು!!. ಸೌರಚಾಲಿತ ಕೃಷಿ ಪಂಪ್ ಸೆಟ್ ಗಳನ್ನೂ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಕೇಂದ್ರ ಸರ್ಕಾರದ ಪಿಎಮ್-ಕುಸುಮ್ ( (PM-KUSUM: Pradhan Mantri Kisan Urja Suraksha evam Uttan Mahaabhiyan) Component – B ಯೋಜನೆಯಡಿ ಜಾಲಮುಕ್ತ ಸೌರ ಚಾಲಿತ ಕೃಷಿ ಪಂಪ್‌ಸೆಟ್‌ಗಳಿಗಾಗಿ ರೈತರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪಿಎಮ್-ಕುಸುಮ್ ಯೋಜನೆಯಡಿ ಮೊದಲ ಹಂತದಲ್ಲಿ ಸುಮಾರು 4400 ಜಾಲಮುಕ್ತ ಸೌರ ಶಕ್ತಿ ಚಾಲಿತ ಪಂಪ್‌ಸೆಟ್‌ಗಳನ್ನು ಅಳವಡಿಸುವ ಯೋಜನೆಯನ್ನು ಕೆ.ಆರ್.ಇ.ಡಿ.ಎಲ್. ಮೂಲಕ ರಾಜ್ಯ ವ್ಯಾಪ್ತಿಯ ವಿದ್ಯುತ್ ಸರಬರಾಜು ಕಂಪನಿಗಳ ಸಹಯೋಗದೊಂದಿಗೆ ಕೈಗೊಳ್ಳಲು ಘನ ಕರ್ನಾಟಕ ಸರ್ಕಾರವು ತೀರ್ಮಾನ ಕೈಗೊಂಡಿದೆ.

ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಒದಗಿಸಬೇಕಾದ ವಿವರಗಳನ್ನು ಕೆ.ಆರ್.ಇ.ಡಿ.ಎಲ್. ಅಧಿಕೃತ ಜಾಲತಾಣ: www.kredl.karnataka.gov.in ದಲ್ಲಿ ಮಾಹಿತಿ ನೀಡಲಾಗಿದೆ. ಪರಿಶಿಷ್ಠ ಜಾತಿ/ಪರಿಶಿಷ್ಟ ಪಂಗಡ ರೈತ ಬಾಂಧವರಿಗೆ ಶೇ.80 ರಷ್ಟು ಸಬ್ಸಿಡಿ ಹಾಗೂ ಇತರೆ ವರ್ಗಗಳ ರೈತ ಬಾಂಧವರಿಗೆ ಶೇ.60 ರಷ್ಟು ಸಬ್ಸಿಡಿ ದೊರೆಯಲಿದ್ದು, ರೈತ ಬಾಂಧವರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕೆಂದು ವಿನಂತಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕೆ.ಆರ್.ಇ.ಡಿ.ಎಲ್. ಪ್ರಾದೇಶಿಕ ಕಛೇರಿ, ಕಲಬುರಗಿ, ದೂ.ಸಂ: 9986025252, 9742310108 ಗೆ ಸಂಪರ್ಕಿಸಬಹುದು ಎಂದು ಕಲಬುರಗಿಯ ಕೆ.ಆರ್.ಇ.ಡಿ.ಎಲ್ ಪ್ರಾದೇಶಿಕ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.