Home Education ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್!!

ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್!!

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರು: ಪ್ರಥಮ ಪಿಯುಸಿ ದಾಖಲಾತಿಯಾಗುತ್ತಿರುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಗುಡ್ ನ್ಯೂಸ್ ನೀಡಿದ್ದು, ದಾಖಲಾತಿಯ ದಿನಾಂಕವನ್ನು ವಿಸ್ತರಿಸಿ ಶಿಕ್ಷಣ ಇಲಾಖೆ ಆದೇಶವನ್ನು ನೀಡಿದೆ.

ಎಸ್‌ಎಸ್‌ಎಲ್‌ಸಿಯಲ್ಲಿ ದಾಖಲೆಯ ಫಲಿತಾಂಶ ಬಂದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಯಾವ ಕೋರ್ಸ್ ಆಯ್ಕೆ ಮಾಡಿಕೊಳ್ಳಬೇಕು ಎಂಬ ಗೊಂದಲದಲ್ಲಿದ್ದಾರೆ. ಜೊತೆಗೆ ಸಿಬಿಎಸ್‌ಇ ಮತ್ತು ಐಸಿಎಸ್‌ಸಿಯ 10ನೇ ತರಗತಿಯ ಫಲಿತಾಂಶ ಪ್ರಕಟವಾಗಿಲ್ಲ. ಇದರಿಂದಾಗಿ ಪ್ರಥಮ ಪಿಯುಸಿ 2022-23ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ದಾಖಲಾತಿಯ ದಿನಾಂಕವನ್ನು ದಂಡ ಶುಲ್ಕವಿಲ್ಲದೇ 16/06/2022 ರಿಂದ 11/07/2022ವೆರಗೂ ವಿಸ್ತರಿಸಿ ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶಿಸಿದೆ.

ದಾಖಲಾತಿಯನ್ನು ದಿನಾಂಕ 15/06/2022ವರಗೂ ಮತ್ತು ದಂಡ ಶುಲ್ಕದೊಂದಿದೆ 30/06/2022 ವೆರಗೂ ನಿಗದಿ ಪಡಿಸಲಾಗಿತ್ತು. ಆದರೆ ಸಿಬಿಎಸ್‌ಇ ಹಾಗೂ ಐಸಿಎಸ್‌ಸಿ ಬೋರ್ಡ್‌ಗಳಲ್ಲಿ ಹತ್ತನೇ ತರಗತಿಯ ಫಲಿತಾಂಶ ಪ್ರಕಟಣೆ ತಡವಾಗುತ್ತಿರುವುದರಿಂದ ಅನೇಕ ಪೋಷಕರು ವಿದ್ಯಾರ್ಥಿಗಳು ದಾಖಲಾತಿ ದಿನಾಂಕವನ್ನು ವಿಸ್ತರಿಸುವಂತೆ ಮನವಿಯನ್ನು ಮಾಡಿದ್ದರು. ಹೀಗಾಗಿ ದಿನಾಂಕ ವಿಸ್ತರಣೆ ಮಾಡಲಾಗಿದೆ. ಇನ್ನು ಹೊಸ ಕಾಲೇಜು ಮತ್ತು ಹೊಸ ಸಂಯೋಜನೆಗಳಿಗೆ ಅನುಮತಿ ನೀಡುವ ಕಾರ್ಯ ಪ್ರಗತಿಯಲ್ಲಿರುವುದರಿಂದ ದಂಡ ಶುಲ್ಕರಹಿತವಾಗಿ ಪ್ರಥಮ ಪಿಯುಸಿ ದಾಖಲಾತಿ ದಿನಾಂಕ ತಿಳಿಸಿದೆ.

ಪದವಿ ಪೂರ್ವ ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶ ಕೇವಲ ಪ್ರಥಮ ಪಿಯುಸಿಗೆ ಮಾತ್ರ ಅನ್ವಯವಾಗಲಿದೆ. ಇನ್ನು ದ್ವಿತೀಯ ಪಿಯುಸಿಗೆ ನೀಡಲಾಗಿರುವ ಮಾರ್ಗಸೂಚಿ ಅನ್ವಯ ದಾಖಲಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ದ್ವಿತೀಯ ಪಿಯುಸಿ ದಾಖಲಾತಿ ದಿನಾಂಕವನ್ನು ಯಾವುದೇ ಕಾರಣಕ್ಕೂ ವಿಸ್ತರಣೆ ಮಾಡುವುದಿಲ್ಲ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ.

ಇನ್ನು ಪ್ರಥಮ ಪಿಯುಸಿ ವಿದ್ಯಾರ್ಥಿಗಳು ದಾಖಲಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದಾರೆ. ಈ ವಿದ್ಯಾರ್ಥಿಗಳಿಗೆ ಇಂದಿನಿಂದ ತರಗತಿಗಳು ಪ್ರಾರಂಭವಾಗುತ್ತಿದೆ. ಎಸ್‌ಎಸ್‌ಎಲ್‌ಸಿ 2021-22 ಸಾಲಿನಲ್ಲಿ ಅನುತ್ತೀರ್ಣರಾಗಿದ್ದ ವಿದ್ಯಾರ್ಥಿಗಳ ಪೂರಕ ಪರೀಕ್ಷೆ ಜೂನ್ 27 ಜುಲೈ 4ರವರೆಗೂ ನಡೆಯಲಿದ್ದು, ಈ ಪೂರಕ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೂ ಪ್ರಥಮ ಪಿಯುಸಿಗೆ ಸೇರಲು ಅನುಕೂಲವಾಗಲಿದೆ.