Home News OPS: ಹಳೆ ಪಿಂಚಣಿ ಜಾರಿ ವಿಚಾರ- ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ !!

OPS: ಹಳೆ ಪಿಂಚಣಿ ಜಾರಿ ವಿಚಾರ- ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ !!

OPS

Hindu neighbor gifts plot of land

Hindu neighbour gifts land to Muslim journalist

OPS: ಕರ್ನಾಟಕದ ಕಾಂಗ್ರೆಸ್ ಸರ್ಕಾರ ತಾನು ಅಧಿಕಾರಕ್ಕೆ ಬರುವ ಮೊದಲು, ಕಾಂಗ್ರೆಸ್ ಏನಾದರೂ ಗೆದ್ದು ಸರ್ಕಾರ ರಚನೆ ಮಾಡಿದರೆ ರಾಜ್ಯ ಸರ್ಕಾರಿ ನೌಕರರ ಬೇಡಿಕೆಯಂತೆ ಹೊಸ ಪಿಂಚಣಿ ಯೋಜನೆ (NPS) ರದ್ದುಗೊಳಿಸಿ ಹಳೆಯ ಪಿಂಚಣಿ(OPS) ಯೋಜನೆಯನ್ನು ಪುನಃ ಜಾರಿಗೆ ತರುವ ಭರವಸೆ ನೀಡಿತ್ತು.

ಇದನ್ನೂ ಓದಿ: Kashinath: ನಿರ್ದೇಶನ ಕಲಿಯದೇ ಕಾಶಿನಾಥ್ ಬಾಲಿವುಡ್ ನಲ್ಲಿ ಸಿನಿಮಾ ಮಾಡಿದ್ದು ಹೇಗೆ ಗೊತ್ತಾ?

ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ(Congress Government) ರಚನೆಯಾಗಿ, ಅಧಿಕಾರಕ್ಕೆ ಬಂದು ವರ್ಷವೇ ಕಳೆಯುತ್ತಾ ಬಂದರೂ ಈ ಕುರಿತ ಯಾವುದೇ ಆದೇಶ ಹೊರಡಿಸುವುದು, ಕ್ರಮ ಕೈಗೊಳ್ಳುವುದು ಆಗಿರಲಿಲ್ಲ. ಆದರೀಗ ಇದೀಗ ಸಿಎಂ ಸಿದ್ದರಾಮಯ್ಯನವರು(CM Siddaramaiah) ಒಪಿಎಸ್ ಜಾರಿ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: Rahul Gandhi: ನಾನು ಶೀಘ್ರದಲ್ಲೇ ಮದುವೆಯಾಗಬೇಕಾಗಿದೆ; ರಾಗಾ ಉವಾಚ

ಹೌದು, ವಿಧಾನಸಭಾ ಚುನಾವಣೆ(Vidhanasabhe Election) ಕಳೆದು, ಲೋಕಸಭಾ ಚುನಾವಣೆ ಮುಗಿದಿದೆ. ಇನ್ನೂ ಒಪಿಎಸ್ ಜಾರಿ ಬಗ್ಗೆ ಸಿಎಂ ಯಾವುದೇ ಚಕಾರ ಎತ್ತಿರಲೆಲ್ಲ. ಆದರೀಗ ವಿದಾನ ಪರಿಷತ್(Vidhana parishath) ಚುನಾವಣೆ ಎದುರಾಗಿದ್ದು, ಈ ಚುನಾವಣೆಗೂ ಮುನ್ನವೇ ಪ್ರಣಾಳಿಕೆಯಲ್ಲಿನ ಭರವಸೆಯನ್ನು ಈಡೇರಿಸುವ ಚಿಂತನೆಯನ್ನು ಸರ್ಕಾರ ನಡೆಸಿದೆ. ಒಪಿಎಸ್ ಜಾರಿ ಬಗ್ಗೆ ವಿಧಾನ ಪರಿಷತ್ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿಯೂ ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ವಿಧಾನ ಪರಿಷತ್ ಚುನಾವಣೆಯ ನೈರುತ್ಯ ಪದವಿಧರರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಯನೂರ್ ಮಂಜುನಾಥ್ ಮಾಹಿತಿ ನೀಡಿದ್ದು, ಈಗಾಗಲೇ 1/4/2006ಕ್ಕಿಂತ ಮುಂಚೆ ರಾಜ್ಯ ಸರ್ಕಾರದ ಅಧಿಸೂಚನೆಯನ್ವಯ ನೇಮಕಾತಿ ಹೊಂದಿರುವ ನೌಕರರಿಗೆ ಹಳೆ ಪಿಂಚಣಿ ಯೋಜನೆ ಅನುಷ್ಠಾನವಾಗಲಿದೆ. ಈ ಬಗ್ಗೆ ಕಾಂಗ್ರೆಸ್ ಸರ್ಕಾರ ಗಂಭೀರವಾಗಿದ್ದು, ಶೀಘ್ರದಲ್ಲೇ ಯೋಜನೆಯನ್ನು ಜಾರಿಗೆ ತರಲಿದೆ ಎಂದು ಹೇಳಿದ್ದಾರೆ.

ಅಂದಹಾಗೆ ಸರ್ಕಾರದ ಈ ನಿರ್ಧಾರ ಲಕ್ಷಾಂತರ‌ ಸರ್ಕಾರಿ ನೌಕರರಿಗೆ ಅನುಕೂಲವಾಗುವುದಲ್ಲದೆ, ಪರಿಷತ್ತಿನ ಆರೂ ಸ್ಥಾನಗಳನ್ನು ಗೆಲ್ಲಬಹುದು ಎಂಬುದು ಇನ್ನೊಂದು ಲೆಕ್ಕಾಚಾರ. ಹೀಗಾಗಿ ಒಪಿಎಸ್ ಬಗ್ಗೆ ಸರ್ಕಾರದ ನಿಲುವಿನ ಬಗ್ಗೆ ನೌಕರರಿಗೆ ಮನವರಿಕೆ ಮಾಡಿಕೊಡಿ ಎಂದು ಸಿಎಂ ಸಿದ್ದರಾಮಯ್ಯ ಅವರ ಬಳಿ ಪರಿಷತ್‌ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಸೇರಿ ಕೈ ಅಭ್ಯರ್ಥಿಗಳು ಸಭೆಯಲ್ಲಿ ಮನವಿ ಮಾಡಿದ್ದಾರೆ. ಇದಕ್ಕೆ ಸಿದ್ದರಾಮಯ್ಯ ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗಿದೆ.