Home News ಕರ್ನಾಟಕ ಪೊಲೀಸರಿಗೆ ಸಿಹಿ ಸುದ್ದಿ, ಭರ್ಜರಿ ಗಿಫ್ಟ್‌ ನೀಡಿದ ಸರಕಾರ

ಕರ್ನಾಟಕ ಪೊಲೀಸರಿಗೆ ಸಿಹಿ ಸುದ್ದಿ, ಭರ್ಜರಿ ಗಿಫ್ಟ್‌ ನೀಡಿದ ಸರಕಾರ

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರು: ಕರ್ನಾಟಕ ಪೊಲೀಸ್‌ ಸಿಬ್ಬಂದಿಯ ಹುಟ್ಟುಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ ನೀಡಲು ಪೊಲೀಸ್‌ ಮಹಾನಿರ್ದೇಶಕ ಡಾ.ಎಂ.ಎ ಸಲೀಂ ಆದೇಶ ಹೊರಡಿಸಿದ್ದಾರೆ.

ಸರಕಾರದ ಸುತ್ತೋಲೆಯಲ್ಲೇನಿದೆ? ವಿಷಯ: ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವಗಳಿಗೆ ಸಾಂದರ್ಭಿಕ ರಜೆ ಮಂಜೂರು ಮಾಡುವ ಕುರಿತು.

ಸಾರ್ವಜನಿಕರ ಸುರಕ್ಷತೆ ಹಾಗೂ ಕಾನೂನು ಜಾರಿಯನ್ನು ಖಚಿತಪಡಿಸಿಕೊಳ್ಳಲು ಕಠಿಣ ಪರಿಸ್ಥಿತಿಗಳಲ್ಲಿ ಕೆಲಸ ನಿರ್ವಹಿಸುವ ಪೊಲೀಸ್ ಸಿಬ್ಬಂದಿಗಳಿಗೆ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವಗಳಂತಹ ವೈಯಕ್ತಿಕ ಕಾರ್ಯಕ್ರಮಗಳನ್ನು ಆಚರಿಸುವುದು ಬಹಳ ಮಹತ್ವದ್ದಾಗಿದೆ. ಈ ವಿಶೇಷ ದಿನಗಳಲ್ಲಿ ರಜೆ ಪಡೆಯುವುದರಿಂದ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾವನಾತ್ಮಕವಾಗಿ ಪುನಶ್ಚತನಗೊಳ್ಳಲು, ಕುಟುಂಬದೊಂದಿಗೆ ಗುಣಮಟ್ಟದ ಸಮಯವನ್ನು ಕಳೆಯಲು ಹಾಗೂ ಕರ್ತವ್ಯ ಮತ್ತು ವೈಯಕ್ತಿಕ ಜೀವನದ ನಡುವೆ ಸಮತೋಲನವನ್ನು ಕಾಪಾಡಿಕೊಳ್ಳಲು ಸಹಾಯವಾಗುತ್ತದೆ. ಇದರಿಂದ ಮನೋಬಲ ವೃದ್ಧಿಯಾಗುತ್ತದೆ. ಒತ್ತಡ ಲಡಿಮೆಯಾಗುತ್ತದೆ ಮತ್ತು ಒಟ್ಟಾರೆ ಕೆಲಸದ ತೃಪ್ತಿ ಉತ್ಪಾದಕತೆಯನ್ನು ಹೆಚ್ಚಿಸುತ್ತದೆ. ಈ ಮಾನವೀಯ ಕಾರ್ಯವು ಅವರ ತ್ಯಾಗಗಳನ್ನು ಗುರುತಿಸುವುದರ ಜೊತೆಗೆ ನಿಷ್ಠೆಯನ್ನು ಬೆಳೆಸುತ್ತದೆ ಮತ್ತು ಪೊಲೀಸ್ ಪಡೆಯ ಬದ್ಧತೆಯನ್ನು ಬಲಪಡಿಸಿ, ಸೇವೆಯಲ್ಲಿ ಉತ್ತಮ ಶಿಸ್ತು ಮತ್ತು ಕಾರ್ಯಕ್ಷಮತೆಗೆ ಸಹಕಾರಿಯಾಗುತ್ತದೆ.

ಈ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ತಮ್ಮ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವದ ಸಂದರ್ಭದಲ್ಲಿ ರಜೆ ಕೋರಿದಲ್ಲಿ, ತಪ್ಪದೆ ರಜೆ ಮಂಜೂರು ಮಾಡಲು ಎಲ್ಲಾ ಘಟಕಾಧಿಕಾರಿಗಳಿಗೆ ನಿರ್ದೇಶಿಸಿದೆ.

ರಜೆ ಯಾರಿಗೆಲ್ಲ?
ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯರಾದ ಮೋಹನ್ ಕುಮಾರ್ ದಾನಪ್ಪ ಅವರು ನೀಡಿದ ಸಲಹೆಯ ಮೇರೆಗೆ ಈ ನಿರ್ಧಾರಕ್ಕೆ ಚಾಲನೆ ಸಿಕ್ಕಿದೆ. ಪ್ರಮುಖವಾಗಿ ಕೆಳ ಹಂತದ ಸಿಬ್ಬಂದಿಗಳಾದ ಪೊಲೀಸ್ ಕಾನ್ಸ್‌ಟೇಬಲ್ (PC), ಹೆಡ್ ಕಾನ್ಸ್‌ಟೇಬಲ್ (HC) ಸಹಾಯಕ ಪೊಲೀಸ್ ಉಪನಿರೀಕ್ಷಕರು (ASI), ಈ ಶ್ರೇಣಿಯ ಅಧಿಕಾರಿಗಳಿಗೆ ರಜೆ ಸೌಲಭ್ಯ ಸಿಗಲಿದೆ.