ಶುಕ್ರವಾರ, 6 ನವೆಂಬರ್ 2026

ರಾಜ್ಯದ ಮದ್ಯ ಪ್ರಿಯರಿಗೆ ಸಿಹಿ ಸುದ್ದಿ- ಬಿಯರ್ ಮತ್ತು ವಿಸ್ಕಿ ದರ ಇಳಿಕೆ ಮಾಡಿ ಸರ್ಕಾರ ಆದೇಶ

Advertisement
Advertisement

ರಾಜ್ಯದ ಮದ್ಯ ಪ್ರಿಯರಿಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದ್ದು, ಕರ್ನಾಟಕದ ನೂತನ ಅಬಕಾರಿ ನೀತಿಯಿಂದ ಬಿಯರ್ ಮತ್ತು ಪ್ರೀಮಿಯಂ ಸ್ಕಾಚ್ ದರ ಶೇ. 20-25 ರಷ್ಟು ಇಳಿಕೆಯಾಗಿದೆ.

Sponsored

ಯಸ್, ರಾಜ್ಯ ಸರ್ಕಾರವು ಮೇ 11 ರಿಂದ ನೂತನ ‘ಆಲ್ಕೋಹಾಲ್ ಇನ್ ಬೆವರೇಜ್’ (AiB) ನೀತಿಯನ್ನು ಜಾರಿಗೊಳಿಸಿದ್ದು, ಇದರಿಂದ ಪ್ರೀಮಿಯಂ ಬಿಯರ್ (Beer) ಹಾಗೂ ಸ್ಕಾಚ್ ವಿಸ್ಕಿಗಳ ಬೆಲೆಯಲ್ಲಿ ಗಣನೀಯ ಇಳಿಕೆಯಾಗಿದೆ. ಆದರೆ ಸಾಮಾನ್ಯ ಜನರು ಬಳಸುವ ಕಡಿಮೆ ದರದ ಮದ್ಯದ ಬೆಲೆ ಏರಿಕೆಯಾಗಿದೆ. ಮೇ 11 ರಿಂದ ಜಾರಿಗೆ ಬಂದಿರುವ ಈ ನಿಯಮದಡಿ 16 ಸ್ಲ್ಯಾಬ್‌ಗಳನ್ನು 8ಕ್ಕೆ ಇಳಿಸಲಾಗಿದ್ದು, ಆಲ್ಕೋಹಾಲ್ ಅಂಶದ ಆಧಾರದ ಮೇಲೆ ತೆರಿಗೆ ವಿಧಿಸಲಾಗುತ್ತಿದೆ.

Advertisement
Advertisement

ಬಿಯರ್ ದರದಲ್ಲಿ 20-25% ಇಳಿಕೆ

Advertisement

ಹೊಸ ನೀತಿಯನ್ವಯ ಶೇ 5ರಷ್ಟು ಆಲ್ಕೋಹಾಲ್ ಹೊಂದಿರುವ ಮೈಲ್ಡ್ ಮತ್ತು ಲಾಗರ್ ಬಿಯರ್‌ಗಳ ಬೆಲೆ ಶೇ 20 ರಿಂದ 25 ರಷ್ಟು ಇಳಿಕೆಯಾಗಿದೆ. ಕಿಂಗ್‌ಫಿಶರ್ ಪ್ರೀಮಿಯಂ ಮತ್ತು ಅಲ್ಟ್ರಾ 650 ಎಂಎಲ್ ಬಾಟಲಿಗಳ ಮೇಲೆ ಸುಮಾರು 75 ರೂ. ಇಳಿಕೆಯಾಗಿದ್ದರೆ, ಹೈನೆಕೆನ್ ಮೇಲೆ 70 ರೂ., ಯುಬಿ ಎಕ್ಸ್‌ಪೋರ್ಟ್ ಮೇಲೆ 25 ರೂ. ಹಾಗೂ ಬಡ್‌ವೈಸರ್ ಪ್ರೀಮಿಯಂ ಮೇಲೆ 20 ರೂ.ಗಳವರೆಗೆ ರಿಯಾಯಿತಿ ಸಿಗಲಿದೆ.

ಪ್ರೀಮಿಯಂ ಸ್ಕಾಚ್ ಮತ್ತು ವಿಸ್ಕಿ ಅಗ್ಗ

ಬಿಯರ್ ಮಾತ್ರವಲ್ಲದೆ, ವಿದೇಶಿ ಬ್ರಾಂಡ್‌ನ ಸ್ಕಾಚ್ ವಿಸ್ಕಿಗಳ ಬೆಲೆಯೂ ಶೇ. 20 ರಷ್ಟು ಕಡಿಮೆಯಾಗಿದೆ. ಉದಾಹರಣೆಗೆ, ಬ್ಲ್ಯಾಕ್ ಲೇಬಲ್ ಮತ್ತು ಶಿವಾಸ್ ರೀಗಲ್‌ನ 750 ಎಂಎಲ್ ಬಾಟಲಿಯ ಬೆಲೆ 5,190 ರೂ.ಗಳಿಂದ 4,100 ರೂ.ಗೆ ಇಳಿದಿದೆ.

Advertisement
Advertisement