Home News Education Department : ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ – ಪ್ರತಿ ತಿಂಗಳ 3 ನೇ...

Education Department : ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ – ಪ್ರತಿ ತಿಂಗಳ 3 ನೇ ಶನಿವಾರ `ಬ್ಯಾಗ್ ಲೆಸ್ ಡೇ’ಗೆ ಸರ್ಕಾರ ಆದೇಶ!!

Hindu neighbor gifts plot of land

Hindu neighbour gifts land to Muslim journalist

Education Department : ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದ್ದು, ಪ್ರತಿ ತಿಂಗಳು ಈ ಶನಿವಾರ ಸಂಭ್ರಮದ ದಿನವನ್ನು ಆಚರಿಸಲು ಆದೇಶ ನೀಡಿದೆ.

ಹೌದು, 2025-26 ನೇ ಸಾಲಿನಲ್ಲಿ ಪ್ರತಿ ತಿಂಗಳು 3 ನೇ ಶನಿವಾರ ಶಾಲಾ ಹಂತದಲ್ಲಿ ಸದರಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ತಿಳಿಸಲಾಗಿದ್ದು, ಮಕ್ಕಳನ್ನು ಬಹುಮುಖ ಚಟುವಟಿಕೆಗಳಲ್ಲಿ ತೊಡಗಿಸುವುದರ ಮೂಲಕ ನಾಗರಿಕ ಪ್ರಜ್ಞೆಯನ್ನು ಬೆಳೆಸಲು ವಿವಿಧ ವಿಷಯಗಳಲ್ಲಿ ವಿದ್ಯಾರ್ಥಿಗಳಿಗಾಗಿ 10 ಸ್ವಯಂ ವಿವರಣಾತ್ಮಕ ಮಾಡ್ಯೂಲ್ ಗಳನ್ನು ಸಿದ್ದಪಡಿಸಿದೆ. ಹಾಗೂ ಶಿಕ್ಷಕರಿಗೆ ಮಾರ್ಗದರ್ಶಿ ಕೈಪಿಡಿಗಳನ್ನು ಸಿದ್ದಪಡಿಸಲಾಗಿದೆ.

 

ಅಲ್ಲದೆ ಸಂಭ್ರಮ ಶನಿವಾರ ದಿನದಂದು ಜಿಲ್ಲಾ ಹಂತ ಮತ್ತು ಬ್ಲಾಕ್ ಹಂತದ ಎಲ್ಲಾ ಅಧಿಕಾರಿಗಳು ಹಾಗೂ ಸಿಆರ್ ಪಿಗಳು ಕಡ್ಡಾಯವಾಗಿ ಶಾಲೆಗಳಿಗೆ ಭೇಟಿ ನೀಡಿ ಅನುಪಾಲಿಸುವುದು ಹಾಗೂ ಅಗತ್ಯ ಮಾರ್ಗದರ್ಶನ ನೀಡುವುದು ಕಾರ್ಯಕ್ರಮದ ಯಶಸ್ಸಿಗೆ ಪಾಲ್ಗೊಳ್ಳಬೇಕು ಎಂದು ಸೂಚನೆ ನೀಡಿದೆ.

 

ಇನ್ನು ರಾಜ್ಯದ ಉರ್ದು ಶಾಲೆಗಳಲ್ಲಿ ಶನಿವಾರ ಪೂರ್ಣ ದಿನವಾಗಿದ್ದು, ಶುಕ್ರವಾರ ಅರ್ಧ ದಿನ ಶಾಲೆ ನಡೆಯುವುದರಿಂದ ಪ್ರತಿ ತಿಂಗಳ 3ನೇ ಶುಕ್ರವಾರ ಬ್ಯಾಗ್ರಹಿತ ದಿನವನ್ನಾಗಿ ಆಚರಿಸಲು ಶಿಕ್ಷಣ ಇಲಾಖೆ ಸೂಚಿಸಿದೆ.