Home latest ಮಹಿಳೆಯರಿಗೆ ಬಂಪರ್ ಸಿಹಿ ಸುದ್ದಿ | ಉದ್ಯೋಗಿನಿ ಯೋಜನೆಯಡಿ ಅರ್ಜಿ ಆಹ್ವಾನ

ಮಹಿಳೆಯರಿಗೆ ಬಂಪರ್ ಸಿಹಿ ಸುದ್ದಿ | ಉದ್ಯೋಗಿನಿ ಯೋಜನೆಯಡಿ ಅರ್ಜಿ ಆಹ್ವಾನ

Hindu neighbor gifts plot of land

Hindu neighbour gifts land to Muslim journalist

ಮಹಿಳಾ ಅಭಿವೃದ್ಧಿ ನಿಗಮದಿಂದ ಅನುಷ್ಠಾನಗೊಳಿಸಲಾದ, ಉದ್ಯೋಗಿನಿ ಗ್ರಾಮೀಣ ಮತ್ತು ಅಭಿವೃದ್ಧಿಪಡಿಸಿದ ಪ್ರದೇಶಗಳಿಂದ ಮಹಿಳಾ ಉದ್ಯಮಿಗಳಿಗೆ ಸಬ್ಸಿಡಿಯ ಲೋನ್‌ಗಳನ್ನು ಒದಗಿಸುವ ಯೋಜನೆಯಾಗಿದೆ. ಅಗತ್ಯವಿರುವ ಹಣಕಾಸಿನ ನೆರವು ನೀಡುವ ಮೂಲಕ ಮಹಿಳೆಯರ ಉದ್ಯಮಶೀಲತೆ, ಹಣಕಾಸಿನ ಸಬಲೀಕರಣ ಮತ್ತು ಸ್ವಯಂ ನಿರ್ವಹಣೆಯನ್ನು ಉತ್ತೇಜಿಸುವ ಗುರಿಯನ್ನು ಈ ಯೋಜನೆಯು ಹೊಂದಿದೆ. ಉದ್ಯೋಗಿನಿ ಯೋಜನೆಯು ದೇಶದ ಬೆಳವಣಿಗೆಗೆ ಬೆಂಬಲ ನೀಡುವ ಸೂಕ್ಷ್ಮ- ಉದ್ಯಮಗಳನ್ನು ನಿರ್ಮಿಸುವ ಗುರಿಯನ್ನು ಹೊಂದಿದೆ.

ಈ ಯೋಜನೆಯಡಿ ಆರ್ಥಿಕವಾಗಿ ಹಿಂದುಳಿದ ಮತ್ತು ಸಾಮಾನ್ಯ ಮಹಿಳೆಯರು ಯಾವುದಾದರೂ ಲಾಭದಾಯಕ ಚಟುವಟಿಕೆಯಲ್ಲಿ ಸ್ವಂತ ಉದ್ಯೋಗವನ್ನು ಕೈಗೊಳ್ಳಲು ಬ್ಯಾಂಕಿನಿಂದ ಗರಿಷ್ಠ 3 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ ನೀಡಲಾಗುತ್ತದೆ. ವಿಧವೆ, ಅಂಗವಿಕಲ ಹಾಗೂ ಸಂಕಷ್ಟದಲ್ಲಿರುವ ಸಾಮಾನ್ಯ ವರ್ಗದ ಮಹಿಳೆಯರಿಗೆ ಶೇ.30ರಷ್ಟು ಅಥವಾ ಗರಿಷ್ಠ 90 ಸಾವಿರ ರೂ.ಗಳ ಹಾಗೂ ಪರಿಶಿಷ್ಟ ಜಾತಿ, ಪಂಗಡದ ಮಹಿಳೆಯರಿಗೆ ಶೇ.50ರಷ್ಟು ಅಥವಾ ಗರಿಷ್ಠ 1,50,000 ರೂ.ಗಳವರೆಗೆ ಸಹಾಯಧನವನ್ನು ನೀಡಲಾಗುತ್ತದೆ.

2021-22ನೇ ಸಾಲಿನ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಉಪಯೋಜನೆಯಲ್ಲಿ ಬಳಕೆಯಾಗದ ಅನುದಾನದ ಉದ್ಯೋಗಿನಿ ಯೋಜನೆಯಡಿ ಪರಿಶಿಷ್ಟ ಪಂಗಡದ 14 ಮಹಿಳೆಯರಿಗೆ ಸೌಲಭ್ಯ ಒದಗಿಸಲಾಗಿದೆ.

ದಾವಣಗೆರೆ ಜಿಲ್ಲೆಗೆ ಒಟ್ಟು 14 ಭೌತಿಕ ಗುರಿಯನ್ನು ನಿಗದಿಪಡಿಸಿ ಅರ್ಹ ಪರಿಶಿಷ್ಟ ಪಂಗಡದ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಆದಾಯೋತ್ಪನ್ನ ಚಟುವಟಿಕೆಗಳನ್ನು ಕೈಗೊಳ್ಳಲು
ಬ್ಯಾಂಕುಗಳ ಸಹಯೋಗದೊಂದಿಗೆ ಸಾಲದ ವ್ಯವಸ್ಥೆ ಹಾಗೂ ನಿಗಮದಿಂದ ಸಹಾಯಧನವನ್ನು ನೀಡಲಾಗುವುದು. ನಿಗದಿತ ದಾಖಲಾತಿಗಳೊಂದಿಗೆ ಪಡೆದ ಅರ್ಜಿಯನ್ನು ಪ್ರಾಥಮಿಕ ಪರಿಶೀಲನೆ ಮಾಡಿ ಅರ್ಹ ಅರ್ಜಿಗಳನ್ನು ಜಿಲ್ಲಾಮಟ್ಟದ ಆಯ್ಕೆ ಸಮಿತಿಯಲ್ಲಿ ಆಯ್ಕೆ ಮಾಡಲಾಗುವುದು.

ಆಯ್ಕೆಯಾದ ಅರ್ಜಿಗಳನ್ನು ಅರ್ಜಿದಾರರ ಸೇವಾ ವಲಯದಲ್ಲಿ ಬರುವ ಬ್ಯಾಂಕಿನ ಶಾಖೆಗಳಿಗೆ ಸಾಲ ಮಂಜೂರಾತಿಗಾಗಿ ಶಿಫಾರಸ್ಸು ಮಾಡಲಾಗುವುದು. ಬ್ಯಾಂಕಿನಿಂದ ಸಾಲ ಮಂಜೂರಾದ ನಂತರ ಇಡಿಪಿ ತರಬೇತಿ ಏರ್ಪಡಿಸಿ ಸಹಾಯಧನ ಬಿಡುಗಡೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸುವವರು ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಎಲ್ಲಾ ದಾಖಲಾತಿಗಳೊಂದಿಗೆ ಸೆ.26 ರಂದು ಸಂಜೆ 5:30 ರೊಳಗಾಗಿ ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗಳಿಗೆ ಅರ್ಜಿ ಸಲ್ಲಿಸಬೇಕು. ನಂತರ ಬಂದ ಅಪೂರ್ಣ ಮಾಹಿತಿ ಇರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9449447711 ಯನ್ನು ಸಂಪರ್ಕಿಸುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.