ರಾಜ್ಯ ಸರಕಾರದ ಮಹತ್ವಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಅಪ್ಡೇಟ್ ಮಾಡಬೇಕು ಎನ್ನುವ ವದಂತಿ ಸುಳ್ಳಾಗಿದ್ದು, ಸಾರ್ವಜನಿಕರು ಕಿವಿಗೊಡಬಾರದು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎಸ್.ಚಂದ್ರಭೂಪಾಲ ಅವರು ಸ್ಪಷ್ಟಪಡಿಸಿದ್ದಾರೆ.
ಯೂಟ್ಯೂಬ್ ಸೇರಿ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ತಪ್ಪು ಮಾಹಿತಿಯನ್ನು ನಂಬಿ ಯೋಜನೆಯ ಲಾಭವನ್ನು ಮುಂದುವರೆಸಲು ಫಲಾನುಭವಿಗಳು ಖಾಸಗಿ ಸೈಬರ್ ಕೇಂದ್ರಗಳು ಗ್ರಾಮ್ ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಿಗೆ ಮುಗಿ ಬೀಳುತ್ತಿರುವುದು ಪ್ರಾಧಿಕಾರದ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ವಿನಾಕಾರಣ ಸೈಬರ್ ಕೇಂದ್ರಗಳಿಗೆ ಅಲೆದಾಡಿ ತೊಂದರೆಗೆ ಒಳಗಾಗಬಾರದು ಎಂದು ಮನವಿ ಮಾಡಿದ್ದಾರೆ.



