Home News ಪವಿತ್ರಾ ಗೌಡಗೆ ಮನೆ ಊಟ ಪ್ರಶ್ನಿಸಿ ಸರಕಾರ ಅರ್ಜಿ

ಪವಿತ್ರಾ ಗೌಡಗೆ ಮನೆ ಊಟ ಪ್ರಶ್ನಿಸಿ ಸರಕಾರ ಅರ್ಜಿ

Pavitra Gowda

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರು: ಚಿತ್ರದುರ್ಗದ ಕೊಲೆ ಪ್ರಕರಣದ ಆರೋಪಿಗಳಾದ ಪವಿತ್ರಾಗೌಡ, ನಾಗರಾಜ್ ಮತ್ತು ಲಕ್ಷ್ಮಣ್‌ಗೆ ವಾರಕ್ಕೊಮ್ಮೆ ಮನೆಯಿಂದ ಊಟ ತರಿಸಿಕೊಳ್ಳಲು ಅನುಮತಿ ನೀಡಿ ನ್ಯಾಯಾಲಯ ಹೊರಡಿಸಿರುವ ಆದೇಶ ರದ್ದು ಕೋರಿ ರಾಜ್ಯ ಸರಕಾರ ಹೈಕೋರ್ಟ್‌ಗೆ ಮೆಟ್ಟಿಲೇರಿದೆ.

ಪ್ರಕರಣದ ತನಿಖಾಧಿಕಾರಿ ಗಳಾದ ನಗರದ ಕಾಮಾಕ್ಷಿಪಾಳ್ಯ ‘ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಕ್ರಮವಾಗಿ 1, 11 ಮತ್ತು 12ನೇ ಆರೋಪಿಗಳಾದ ಪವಿತ್ರಾ ಗೌಡ, ನಾಗರಾಜು ಮತ್ತು ಲಕ್ಷ್ಮಣ್ ಅವರನ್ನು ಪ್ರತಿವಾದಿ ಮಾಡಲಾಗಿದೆ. ಅರ್ಜಿ ಇನ್ನೂ ನ್ಯಾಯಪೀಠದ ಮುಂದೆ ವಿಚಾರಣೆಗೆ ಬರಬೇಕಿದೆ.

ಜೈಲು ಆಹಾರ ಗುಣಮಟ್ಟದ ಬಗ್ಗೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ (ಎಫ್‌ಎಸ್‌ಎಸ್‌ಎಐ) ಪ್ರಾಧಿಕಾರವು ನಾಲ್ಕು ಸರ್ಟಿಫಿಕೇಟ್ ನೀಡಿದೆ. ಜೈಲಿನಲ್ಲಿ ಪೂರೈಸುತ್ತಿರುವ ಆಹಾರದ ತಯಾರಿಕೆ ಹಾಗೂ ಗುಣಮಟ್ಟವನ್ನು ಕಾರಾಗೃಹದ ಮುಖ್ಯ ಅಧೀಕ್ಷಕರು ಅಥವಾ ಅಧೀಕ್ಷಕರು, ವೈದ್ಯಾಧಿಕಾರಿಗಳು ಖುದ್ದು ಪರಿಶೀಲಿಸುತ್ತಾರೆ. ಆ ನಂತರವೇ ಆಹಾರವನ್ನು ಕೈದಿಗಳಿಗೆ ಪೂರೈಸಲಾಗುತ್ತದೆ. ವೈದ್ಯಾಧಿಕಾರಿಗಳ ಶಿಫಾರಸು ಇಲ್ಲದೆ ಯಾವುದೇ ಕೈದಿಗೂ ಮನೆಯಿಂದ ಊಟ ತರಿಸಿಕೊಳ್ಳಲು ಅವಕಾಶವಿಲ್ಲ. ಈ ಮೂವರು ಆರೋಪಿಗಳಿಗೆ ಮನೆಯಿಂದ ಊಟ ತರಿಸಿಕೊಳ್ಳಲು ಅನುಮತಿಸಿದರೆ, ಜೈಲಿನ ಇತರೆ ಕೈದಿಗಳು ಸಹ ಅದೇ ಮನವಿ ಮಾಡಲಿದ್ದಾರೆ. ಬೀರುತ್ತದೆ ಇದು ಜೈಲಿನ ಆಡಳಿತದ ಮೇಲೆ ದುಷ್ಪರಿಣಾಮ ವಿವರಿಸಲಾಗಿದೆ.

ಆದ್ದರಿಂದ ಅಧೀನ ನ್ಯಾಯಾಲಯದ ಆದೇಶ ರದ್ದುಪಡಿಸಬೇಕು ಎಂದು ಕಾಮಾಕ್ಷಿಪಾಳ್ಯ ಠಾಣಾಧಿಕಾರಿ ಅರ್ಜಿಯಲ್ಲಿ ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ.

ಈ ಮೂವರು ಆರೋಪಿಗಳು ಸಲ್ಲಿಸಿದ ಮನವಿ ಆಧರಿಸಿ ನಗರದ 57ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ಮನೆ ಊಟ ತರಿಸಿಕೊಳ್ಳಲು ಆರೋಪಿಗಳಿಗೆ ಅನುಮತಿಸುವಂತೆ ಜೈಲು ಅಧಿಕಾರಿಗಳಿಗೆ 2025ರ ಡಿ.29ರಂದು ಸೂಚಿಸಿತ್ತು.