Home » ವಿಕಸಿತ ಕರ್ನಾಟಕ ನಿರ್ಮಾಣಕ್ಕೆ ಒಗ್ಗಟ್ಟಾಗಿ ಶ್ರಮಿಸಿ: ರಾಜ್ಯಪಾಲ ಗೆಹ್ಲೋಟ್

ವಿಕಸಿತ ಕರ್ನಾಟಕ ನಿರ್ಮಾಣಕ್ಕೆ ಒಗ್ಗಟ್ಟಾಗಿ ಶ್ರಮಿಸಿ: ರಾಜ್ಯಪಾಲ ಗೆಹ್ಲೋಟ್

0 comments

ಬೆಂಗಳೂರು: 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಲೋಕಭವನದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಇದಕ್ಕೂ ಮುನ್ನ ಮಹಾತ್ಮ ಗಾಂಧೀಜಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗಳಿಗೆ ಪುಷ್ಪನಮನ ಸಲ್ಲಿಸಿದರು.


ರಾಜ್ಯದ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಕೋರಿದ ರಾಜ್ಯಪಾಲರು, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಸ್ಮರಿಸಿದರು. ಕರ್ನಾಟಕವು ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದು, ಯುವಕರು, ರೈತರು, ಮಹಿಳೆಯರು ಹಾಗೂ ಕಾರ್ಮಿಕರ ಕೊಡುಗೆ ಮಹತ್ವದ್ದಾಗಿದೆ ಎಂದರು.

ಸಂವಿಧಾನದ ಮೌಲ್ಯಗಳನ್ನು ಕಾಪಾಡಿ, ಸಾಮಾಜಿಕ ಸಾಮರಸ್ಯ, ಪರಿಸರ ಸಂರಕ್ಷಣೆ ಹಾಗೂ ಸಮಾನತೆಯನ್ನು ಬಲಪಡಿಸುವ ಮೂಲಕ ವಿಕಸಿತ ಕರ್ನಾಟಕ ಮತ್ತು ವಿಕಸಿತ ಭಾರತ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

You may also like