Home » ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್‌ನ್ಯೂಸ್: ಈ ತಿಂಗಳೇ 33ನೇ ಕಂತಿನ ಹಣ ಜಮೆ

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್‌ನ್ಯೂಸ್: ಈ ತಿಂಗಳೇ 33ನೇ ಕಂತಿನ ಹಣ ಜಮೆ

0 comments

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ ಹಣಕ್ಕಾಗಿ ಕಾಯುತ್ತಿರುವ ಅರ್ಹ ಮಹಿಳಾ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. 33ನೇ ಕಂತಿನ ಹಣವನ್ನು ಇದೇ ತಿಂಗಳಲ್ಲಿ ನೇರ ಲಾಭ ವರ್ಗಾವಣೆ (DBT) ಮೂಲಕ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆ ಮಾಡಲು ಸರ್ಕಾರ ನಿರ್ಧರಿಸಿದೆ.
ಗೃಹಲಕ್ಷ್ಮಿ ಯೋಜನೆಯಲ್ಲಿ ಅನರ್ಹ ಫಲಾನುಭವಿಗಳನ್ನು ಗುರುತಿಸಿ, ಅರ್ಹರನ್ನು ಮಾತ್ರ ಮುಂದುವರಿಸುವ ಉದ್ದೇಶದಿಂದ ಮನೆ-ಮನೆ ಸಮೀಕ್ಷೆ ನಡೆಸಲು ಇಲಾಖೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಸಮೀಕ್ಷೆ ಪೂರ್ಣಗೊಳ್ಳುವವರೆಗೆ 33ನೇ ಕಂತಿನ ಹಣ ಬಿಡುಗಡೆ ವಿಳಂಬವಾಗಬಹುದು ಎಂಬ ಆತಂಕ ಫಲಾನುಭವಿಗಳಲ್ಲಿ ಮೂಡಿತ್ತು.
ಆದರೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಭೆಯಲ್ಲಿ ಅರ್ಹ ಮಹಿಳೆಯರಿಗೆ ಯಾವುದೇ ತೊಂದರೆಯಾಗದಂತೆ ಬಾಕಿ ಇರುವ 33ನೇ ಕಂತಿನ ಹಣ ಬಿಡುಗಡೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಇದರೊಂದಿಗೆ, ಸಮೀಕ್ಷೆ ಪ್ರಕ್ರಿಯೆ ಮುಂದುವರಿದರೂ ಅರ್ಹ ಫಲಾನುಭವಿಗಳಿಗೆ ಹಣ ಸಿಗಲಿದೆ. ಮತ್ತೊಂದೆಡೆ, ಯೋಜನೆಯಲ್ಲಿ ಅನರ್ಹರನ್ನು ಪತ್ತೆಹಚ್ಚುವ ಮನೆ-ಮನೆ ಸಮೀಕ್ಷೆ ಇಂದಿನಿಂದ ಆರಂಭವಾಗಲಿದ್ದು, ದಾಖಲೆಗಳು ಹಾಗೂ ಅರ್ಹತಾ ಮಾನದಂಡಗಳ ಆಧಾರದ ಮೇಲೆ ಪರಿಶೀಲನೆ ನಡೆಯಲಿದೆ.
ಹೀಗಾಗಿ 33ನೇ ಕಂತಿನ ಹಣದ ಬಗ್ಗೆ ಆತಂಕದಲ್ಲಿದ್ದ ಅರ್ಹ ಮಹಿಳಾ ಫಲಾನುಭವಿಗಳಿಗೆ ಸರ್ಕಾರದ ಈ ನಿರ್ಧಾರದಿಂದ ನಿರಾಳತೆ ಸಿಕ್ಕಂತಾಗಿದೆ.

You may also like