ಚಾಮರಾಜನಗರ: ಹನೂರಿನಲ್ಲಿ ಮೂವರು ಬೇಟೆಗಾರರು ಮೃತಪಟ್ಟ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ತಂಡವು ತನ್ನ ಅಂತಿಮ ವರದಿಯನ್ನು ಸಿದ್ಧಪಡಿಸಿದ್ದು, ಸೋಮವಾರ ಸರ್ಕಾರಕ್ಕೆ ಸಲ್ಲಿಸುವ ಸಾಧ್ಯತೆಯಿದೆ. ತನಿಖಾಧಿಕಾರಿ ದಿನೇಶ್ ಕುಮಾರ್ ಮೀನಾ ಅವರು ಪ್ರಕರಣದ ಕುರಿತು ಸರ್ಕಾರಕ್ಕೆ ವಿಸ್ತೃತ ವರದಿ ಸಲ್ಲಿಸಲಿದ್ದಾರೆ.
ಭೂತ ಬಿಡಿಸುವ ನೆಪದಲ್ಲಿ ಯುವತಿಗೆ ಚಿತ್ರಹಿಂಸೆ ನೀಡಿದ ಆರೋಪ-ಸತೀಶ್ ಪಾತ್ರಿ ವಿರುದ್ಧ ದೂರು
ಘಟನೆಗೆ ಸಂಬಂಧಿಸಿದಂತೆ ಅರಣ್ಯ ಸಿಬ್ಬಂದಿ, ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಪ್ರಕರಣದ ಪ್ರಮುಖ ಸಾಕ್ಷಿಯಾಗಿರುವ ಮಹಿಮಾ ದಾಸ್ ಸೇರಿದಂತೆ ಹಲವರ ಹೇಳಿಕೆಗಳನ್ನು ತನಿಖಾ ತಂಡ ದಾಖಲಿಸಿಕೊಂಡಿದೆ. ಎನ್ಕೌಂಟರ್ ನಡೆದ ದಿನದ ಬೆಳವಣಿಗೆಗಳು, ಗುಂಡಿನ ದಾಳಿ ನಡೆದ ಸಂದರ್ಭ ಹಾಗೂ ಮೂವರು ಬೇಟೆಗಾರರು ಮೃತಪಟ್ಟ ರೀತಿಯ ಕುರಿತು ತನಿಖೆ ನಡೆಸಿ ಸಂಪೂರ್ಣ ವರದಿ ಸಿದ್ಧಪಡಿಸಲಾಗಿದೆ.
ಆಗಸ್ಟ್ 15ರಂದು ನಡೆದ ಪ್ರತಿಭಟನೆ ವೇಳೆ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿದ ಆರೋಪದ ಹಿನ್ನೆಲೆಯಲ್ಲಿ ಗಂಗನದೊಡ್ಡಿ ಗೋವಿಂದ ಸೇರಿದಂತೆ ಆತನ ಸಹಚರರ ವಿರುದ್ಧವೂ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಭೂತ ಬಿಡಿಸುವ ನೆಪದಲ್ಲಿ ಯುವತಿಗೆ ಚಿತ್ರಹಿಂಸೆ ನೀಡಿದ ಆರೋಪ-ಸತೀಶ್ ಪಾತ್ರಿ ವಿರುದ್ಧ ದೂರು
ಇನ್ನೊಂದೆಡೆ, ಶೂಟೌಟ್ ನಡೆದ ಕರಡಿಕಲ್ಲು ಒಡ್ಡು ಪ್ರದೇಶದಲ್ಲಿ ಮೂವರು ಮೃತಪಟ್ಟ ಸ್ಥಳದಲ್ಲಿ ರಕ್ತದ ಕಲೆಗಳು ಇನ್ನೂ ಕಾಣಿಸುತ್ತಿವೆ. ಅರಣ್ಯ ಸಿಬ್ಬಂದಿ ಗುಂಡು ಹಾರಿಸಿದ ಸ್ಥಳದಿಂದ ಕೇವಲ ನಾಲ್ಕೈದು ಅಡಿ ಅಂತರದಲ್ಲೇ ಆಂಥೋಣಿಸ್ವಾಮಿ, ಪೀಟರ್ ಹಾಗೂ ಕುಮಾರ್ ಮೃತಪಟ್ಟಿದ್ದರು ಎನ್ನಲಾಗಿದೆ. ಮೂವರ ಸಾವಿನ ಬಳಿಕ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದ್ದು, ಪ್ರತೀಕಾರದ ಹಿನ್ನೆಲೆಯಲ್ಲಿ ಕಳ್ಳಬೇಟೆ ತಡೆ ಶಿಬಿರಗಳನ್ನೇ ಗುರಿಯಾಗಿಸಿಕೊಂಡು ದುಷ್ಕರ್ಮಿಗಳು ಸ್ಫೋಟ ನಡೆಸಿದ್ದರು. ಡೈನಾಮೈಟ್ ಹಾಗೂ ಜಿಲೆಟಿನ್ ಬಳಸಿ ಹೊಳೆಮುರಿದಟ್ಟಿ ಕಳ್ಳಬೇಟೆ ತಡೆ ಶಿಬಿರದ ಮೇಲೆ ಸ್ಫೋಟ ನಡೆಸಲಾಗಿತ್ತು. ಪ್ರಕರಣದ ತನಿಖಾ ವರದಿ ಸರ್ಕಾರಕ್ಕೆ ಸಲ್ಲಿಕೆಯಾದ ಬಳಿಕ ಎನ್ಕೌಂಟರ್ನ ಸತ್ಯಾಸತ್ಯತೆ ಹಾಗೂ ಘಟನೆಯ ಸಂಪೂರ್ಣ ಹಿನ್ನೆಲೆ ಕುರಿತು ಮತ್ತಷ್ಟು ಸ್ಪಷ್ಟತೆ ದೊರೆಯುವ ನಿರೀಕ್ಷೆಯಿದೆ.



