ಶನಿವಾರ, 24 ಅಕ್ಟೋಬರ್ 2026

ಹನೂರು ರೈತರ ಸಾವು ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಆದೇಶಿಸಿ: ಆರ್. ಅಶೋಕ್

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಅರಣ್ಯ ಪ್ರದೇಶದಲ್ಲಿ ಮೂವರು ರೈತರ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಸರ್ಕಾರದ ವಿವಿಧ ಇಲಾಖೆಗಳ ಹೇಳಿಕೆಗಳಲ್ಲಿ ಸ್ಪಷ್ಟತೆ ಇಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.

 

ಕೋಲ್ಪೆಯಲ್ಲಿ ಕಾರ್ ತಡೆದು ಯುವತಿ ಕುಟುಂಬದ ಮೇಲೆ ಹಲ್ಲೆ? 9 ಮಂದಿಗೆ FIR

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಅವರು, ಘಟನೆಯ ಕುರಿತು ಅರಣ್ಯ ಇಲಾಖೆ, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಂದ ವಿಭಿನ್ನ ಹೇಳಿಕೆಗಳು ಕೇಳಿಬರುತ್ತಿವೆ. ಇದರಿಂದ ಪ್ರಕರಣದ ನೈಜ ಸಂಗತಿ ಏನು ಎಂಬ ಬಗ್ಗೆ ಹಲವು ಅನುಮಾನಗಳು ಮೂಡಿವೆ ಎಂದು ಹೇಳಿದ್ದಾರೆ.

ಮೂವರು ರೈತರ ಜೀವಹಾನಿಯಾಗಿರುವ ಹಿನ್ನೆಲೆಯಲ್ಲಿ ಘಟನೆಗೆ ಕಾರಣವೇನು, ಗುಂಡಿನ ದಾಳಿ ನಡೆದಿದ್ದರೆ ಅದರ ಅನಿವಾರ್ಯತೆ ಏನಿತ್ತು, ನಿಯಮಗಳನ್ನು ಪಾಲಿಸಲಾಗಿತ್ತೇ ಹಾಗೂ ಘಟನೆಯ ಬಳಿಕ ಸಾಕ್ಷ್ಯಗಳನ್ನು ಸೂಕ್ತವಾಗಿ ಸಂರಕ್ಷಿಸಲಾಗಿದೆಯೇ ಎಂಬುದನ್ನು ಸಮಗ್ರವಾಗಿ ಪರಿಶೀಲಿಸಬೇಕಿದೆ ಎಂದು ಅವರು ಒತ್ತಾಯಿಸಿದ್ದಾರೆ.

ಸರ್ಕಾರದ ಅಧೀನದಲ್ಲಿರುವ ಇಲಾಖೆಗಳೇ ಪ್ರಕರಣಕ್ಕೆ ಸಂಬಂಧಿಸಿದ ಆರೋಪಗಳ ಕೇಂದ್ರವಾಗಿರುವ ಸಂದರ್ಭದಲ್ಲಿ, ಇಲಾಖಾ ಮಟ್ಟದ ತನಿಖೆಯಿಂದ ಸಂಪೂರ್ಣ ಸತ್ಯ ಹೊರಬರುವುದು ಕಷ್ಟ. ಹೀಗಾಗಿ ಸ್ವತಂತ್ರ ಹಾಗೂ ನಿಷ್ಪಕ್ಷಪಾತ ತನಿಖೆಯ ಅಗತ್ಯವಿದೆ ಎಂದು ಆರ್. ಅಶೋಕ್ ಹೇಳಿದ್ದಾರೆ.

ಕೋಲ್ಪೆಯಲ್ಲಿ ಕಾರ್ ತಡೆದು ಯುವತಿ ಕುಟುಂಬದ ಮೇಲೆ ಹಲ್ಲೆ? 9 ಮಂದಿಗೆ FIR

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ನ್ಯಾಯಾಂಗ ತನಿಖೆಗೆ ಆದೇಶಿಸಬೇಕು. ಘಟನೆಗೆ ನಿಜವಾದ ಕಾರಣ ಮತ್ತು ಹೊಣೆಗಾರರು ಯಾರು ಎಂಬುದು ಬಹಿರಂಗವಾಗಬೇಕು. ತಪ್ಪಿತಸ್ಥರು ಯಾರೇ ಆಗಿದ್ದರೂ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.