# ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅಭಿಮಾನೋತ್ಸವ – ಶಾಸಕ ಹರೀಶ್ ಪೂಂಜಾರಿಂದ ಪೋಸ್ಟರ್ ಬಿಡುಗಡೆ

- Link: https://hosakannada.com/news/harish-poonja-inaugurated-invitations/
- Published: 2026-05-02T15:34:24+00:00
- Author: ಹೊಸಕನ್ನಡ ನ್ಯೂಸ್

ಬೆಳ್ತಂಗಡಿ: ರೈತ ನಾಯಕ, ಜನಪರ ಹೋರಾಟಗಾರ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ 55
ವರ್ಷಗಳ ರಾಜಕೀಯ ಜೀವನದ ಸಾಧನೆಯನ್ನು ಸಂಭ್ರಮಿಸುವ ಉದ್ದೇಶದಿಂದ ಮೇ 9 ರಂದು ಚಿತ್ರದುರ್ಗದಲ್ಲಿ ನಡೆಯಲಿರುವ
ಬೃಹತ್ ಅಭಿಮಾನೋತ್ಸವ ಕಾರ್ಯಕ್ರಮದ ಪೋಸ್ಟ‌ರ್ ಬಿಡುಗಡೆ ಸಮಾರಂಭವು ಮೇ 2ರಂದು ಗುರುವಾಯನಕೆರೆ ನಮ್ಮ
ಮನೆ ಹವ್ಯಕ ಭವನದಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಪೋಸ್ಟರ್
ಬಿಡುಗಡೆ ಮಾಡಿ ಕಾರ್ಯಕ್ರಮದ ಮಹತ್ವವನ್ನು ವಿವರಿಸಿದರು. ಕಾರ್ಯಕ್ರಮದಲ್ಲಿ ಮಂಗಳೂರು ವಿಭಾಗ ಸಹ ಪ್ರಭಾರಿ
ಜಯಂತ್ ಕೋಟ್ಯಾನ್, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿ
ಪ್ರಶಾಂತ್ ಎಂ. ಪಾರೆಂಕಿ, ಸೀತಾರಾಮ್ ಬೆಳಾಲು, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ ಪುತ್ತೂರು
ಹಾಗೂ ಜಿಲ್ಲಾ ಕಾರ್ಯದರ್ಶಿ ವಸಂತಿ ಮಚ್ಚಿನ ಉಪಸ್ಥಿತರಿದ್ದರು.

Sponsored

Advertisement

Advertisement

Advertisement
