ಹಾಸನ: ಜಮೀನು ವಿಷಯಕ್ಕೆ ಕುರಿತಂತೆ ನೆರೆಯ ಜಮೀನಿನವರಿಂದ ಕಿರಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಅರ್ಜಿ ಸಲ್ಲಿಸಲು ಬಂದಿದ್ದ ರೈತನೊಬ್ಬ ಸಚಿವರ ಎದುರೇ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನ ಮಾಡಿರುವ ಘಟನೆ ಶನಿವಾರ ಹಾಸನ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆದಿದೆ.
Sponsoredಹಾಸನ ತಾಲೂಕಿನ ದುದ್ದ ಹೋಬಳಿಯ ಅಟ್ಟಾವರ ಹೊಸಹಳ್ಳಿ ಗ್ರಾಮದ ಕರೀಗೌಡ (35) ಆತ್ಮಹತ್ಯೆಗೆ ಯತ್ನ ಮಾಡಿದ ರೈತ. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ.ಶಿವಲಿಂಗೇಗೌಡ ಅವರ ಅಧ್ಯಕ್ಷತೆಯಲ್ಲಿ ಪ್ರಜಾಸೇವಾ ಕಾರ್ಯಕ್ರಮ ನಡೆಯುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.
ಕೂಡಲೇ ರೈತನನ್ನು ಹಾಸನದ ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.




