Home News Heart Attack: ಕ್ರಿಕೆಟ್ ಆಡುತ್ತಿರುವ ಸಂದರ್ಭ ಹೃದಯಾಘಾತ: ಯುವಕ ಸಾವು

Heart Attack: ಕ್ರಿಕೆಟ್ ಆಡುತ್ತಿರುವ ಸಂದರ್ಭ ಹೃದಯಾಘಾತ: ಯುವಕ ಸಾವು

Hindu neighbor gifts plot of land

Hindu neighbour gifts land to Muslim journalist

Heart Attack: ಕ್ರಿಕೆಟ್ ಆಡುತ್ತಿರುವ ಸಂದರ್ಭದಲ್ಲಿ ಯುವಕನೊಬ್ಬ ಹೃದಯಾಘಾತದಿಂದ (Heart Attack) ನಿಧನ ಹೊಂದಿದ ಮಾಹಿತಿ ಬೆಳಕಿಗೆ ಬಂದಿದೆ. ಮೂಲತಃ ಮೂಡುಪೆರಾರ ಕಾಯರಾಣೆ ನಿವಾಸಿ ದಿ.ಆನಂದ ಪೂಜಾರಿ ಅವರ ಪುತ್ರ ಪ್ರದೀಪ್ ಪೂಜಾರಿ (31) ಹೃದಯಾಘಾತದಿಂದ ನಿಧನ ಹೊಂದಿರುವುದಾಗಿದೆ.

ಮೂಡುಪೆರಾರ ಕಾಯರಾಣೆಯಲ್ಲಿ ಕ್ರಿಕೆಟ್ ಆಡುವಾಗ ಏಕಯೇಕಿ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಕೈಕಂಬ ಖಾಸಗಿ ಆಸ್ಪತ್ರೆಕರೆದೊಯ್ಯಲಾಗಿತ್ತು. ಅಲ್ಲಿ ಔಷಧ ತೆಗೆದುಕೊಂಡು ಬಳಿಕ ಬಜಪೆ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಆ್ಯಂಬ್ಯುಲೆನ್ಸ್ ನಲ್ಲಿ ಮಂಗಳೂರು ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವಾಗ ದಾರಿ ಮಧ್ಯದಲ್ಲಿ ಚಿಕಿತ್ಸೆ ಫಲಕಾರಿ ಆಗದೆ ಅವರು ಮೃತಪಟ್ಟರು.

ಮೃತ ಯುವಕ ಪಡುಪೆರಾರ ಗ್ರಾಮ ಪಂಚಾಯತ್ ನಲ್ಲಿ 2012ರಲ್ಲಿ ಸಿಬ್ಬಂದಿಯಾಗಿ ಕೆಲಸಕ್ಕೆ ಸೇರಿದ್ದರು.ಜೊತೆಗೆ ರಾಜ್ಯ ಗ್ರಾಮ ಪಂಚಾಯತ್‌ ನೌಕರರ ಶ್ರೇಯಾಭಿವೃದ್ಧಿ ಸಂಘ ಇದರ ಮಂಗಳೂರು ತಾಲೂಕು ಸಮಿತಿಯ ಅಧ್ಯಕ್ಷರಾಗಿದ್ದರು. ಅಲ್ಲದೆ ಕಾಯರಾಣೆ ನವರಂಗ ಫ್ರೆಂಡ್ಸ್‌ನ ಕಾರ್ಯದರ್ಶಿಯಾಗಿದ್ದರು. ಬಜರಂಗದಳದ ಕಾರ್ಯಕರ್ತ, ಜವನೆರ್‌ ಪೆರಾರ್‌ ಸದಸ್ಯರಾಗಿದ್ದರು ಎಂದು ತಿಳಿದು ಬಂದಿದೆ.