ಶನಿವಾರ, 24 ಅಕ್ಟೋಬರ್ 2026

ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ; ಕರಾವಳಿ ಜಿಲ್ಲೆಗಳಲ್ಲಿ ಅಲರ್ಟ್‌ ಘೋಷಣೆ

Mansoon Rain

ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಅಲರ್ಟ್‌ ಘೋಷಣೆ ಮಾಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರುವುದರಿಂದ ಮೀನುಗಾರರು ಕಡಲಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ವರುಣಾರ್ಭಟ ಹೆಚ್ಚಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ.