ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಗಾಳಿ ಆರ್ಭಟ ಹೆಚ್ಚಾಗಿದ್ದು, ಹೀಗಾಗಿ ಇಂದೂ ಈ ಜಿಲ್ಲೆಯ 5 ತಾಲೂಕಿನಲ್ಲಿ ಶಾಲೆ ಹಾಗೂ ಕಾಲೇಜ್ ವಿದ್ಯಾರ್ಥಿಗಳಿಗೆ ರಜೆ ಘೋಷಣೆ ಮಾಡಿ, ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ಆದೇಶ ನೀಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಘಟ್ಟದ ಮೇಲಿನ ತಾಲೂಕುಗಳಾದ ಶಿರಸಿ, ಸಿದ್ದಾಪುರ, ಜೋಯಿಡಾ, ದಾಂಡೇಲಿ ಹಾಗೂ ಯಲ್ಲಾಪುರ ತಾಲೂಕಿನಾದ್ಯಂತ ಶಾಲೆಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ.
ಕನ್ನಡ ಜಿಲ್ಲೆಯಾದ್ಯಂತ ಮಳೆ ಅಬ್ಬರ ಜೋರಾಗೋ ಸಾಧ್ಯತೆ ಇದೆ ಅಂತ ಹವಾಮಾನ ಇಲಾಖೆ ಘೋಷಿಸಿದ್ದು, ನಾಳೆ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಸಂಭಾವ್ಯ ಅನಾಹುತ ತಡೆಯುವ ನಿಟ್ಟಿನಲ್ಲಿ ನಾಳೆ 5 ತಾಲೂಕಿನ ಶಾಲೆಗೆ ರಜೆ ಘೋಷಿಸಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ಆದೇಶ ನೀಡಿದ್ದಾರೆ.



