Home News ಕರ್ನಾಟಕ ಈ ಜಿಲ್ಲೆಗಳಲ್ಲಿ ಗುಡುಗು ಮಿಂಚು ಗಾಳಿ ಸಹಿತ ಭಾರೀ ಮಳೆ | ಅಲರ್ಟ್ ‘...

ಕರ್ನಾಟಕ ಈ ಜಿಲ್ಲೆಗಳಲ್ಲಿ ಗುಡುಗು ಮಿಂಚು ಗಾಳಿ ಸಹಿತ ಭಾರೀ ಮಳೆ | ಅಲರ್ಟ್ ‘ ಯಲ್ಲೋ ‘ ಘೋಷಣೆ

Hindu neighbor gifts plot of land

Hindu neighbour gifts land to Muslim journalist

Heavy Rain | ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ. ಇಂದು ಮತ್ತು ನಾಳೆ ಕರ್ನಾಟಕದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳಭಾಗಕ್ಕೆ ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಿಸಿದೆ. ಜತೆಗೆ ಗುಡುಗು, ಮಿಂಚು, ಜೋರಾದ ಗಾಳಿ ಮತ್ತು ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಉತ್ತರ ತಮಿಳುನಾಡು ಮತ್ತು ನೆರೆಹೊರೆಯ ಪ್ರದೇಶದಲ್ಲಿ ಚಂಡಮಾರುತದ ಪರಿಚಲನೆಯಿಂದಾಗಿ ಮಳೆಯು ಸರಾಸರಿ ಸಮುದ್ರ ಮಟ್ಟದಿಂದ 1.5 ಕಿಮೀ ವರೆಗೆ ವಿಸ್ತರಿಸಿದೆ ಎಂಬ ಮಾಹಿತಿ ಹಂಚಿಕೊಳ್ಳಲಾಗಿದೆ. ಉಳಿದಂತೆ ತೆಲಂಗಾಣ, ರಾಯಲಸೀಮಾ, ವಿದರ್ಭ ಮತ್ತು ಪಶ್ಚಿಮ ಮಧ್ಯಪ್ರದೇಶದಾದ್ಯಂತ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ, ಉತ್ತರ ತಮಿಳುನಾಡು ಮತ್ತು ನೆರೆಹೊರೆ ಮತ್ತು ಪೂರ್ವ ರಾಜಸ್ಥಾನದ ಮೇಲೆ ಚಂಡಮಾರುತದ ಪರಿಚಲನೆ ಇದೆ.

ನೈಋತ್ಯ ಬಂಗಾಳ ಕೊಲ್ಲಿ ಮತ್ತು ಪಕ್ಕದ ಉತ್ತರ ಶ್ರೀಲಂಕಾ ಕರಾವಳಿಯ ಮೇಲೆ ಸರಾಸರಿ ಸಮುದ್ರ ಮಟ್ಟದಿಂದ 3.1 ಕಿಮೀ ಎತ್ತರದಲ್ಲಿ ಚಂಡಮಾರುತದ ಚಲನಶೀಲತೆ ಕಂಡುಬರಲಿದೆ. ಜತೆಗೆ ಗುಡುಗು, ಮಿಂಚು, ಜೋರಾದ ಗಾಳಿ ಮತ್ತು ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಎಚ್ಚರಿಕೆ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ, ಕೋಲಾರ ಜಿಲ್ಲೆಗಳು ಮಳೆಯ ತೀವ್ರ ಹೊಡೆತಕ್ಕೆ ಸಿಲುಕಲಿವೆ.

ಬೆಂಗಳೂರಿನಲ್ಲಿ ನಿನ್ನೆ ಸಾಯಂಕಾಲದಿಂದ ಭಾರೀ ಮಳೆಯಾಗುತ್ತಿದ್ದು ಅದು ಇಂದು ಬೆಳಗ್ಗೆಯೂ ಮುಂದುವರಿದಿದೆ. ಗುಡುಗು ಸಹಿತ ಮಳೆಯಾಗುತ್ತಿದ್ದು ಶಾಲಾ-ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ, ಕಚೇರಿಗಳಿಗೆ, ಕೆಲಸ ಕಾರ್ಯಗಳಿಗೆ ಹೋಗುವ ಸಾರ್ವಜನಿಕರಿಗೆ ತೊಂದರೆಯಾಗಿದೆ. ಉಳಿದಂತೆ ತುಮಕೂರು, ಬೆಂಗಳೂರು ಮತ್ತು ಇತರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯಾಗಲಿವೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.