ಭಾನುವಾರ, 25 ಅಕ್ಟೋಬರ್ 2026
Trending

ದ.ಕ, ಉಡುಪಿ ಸೇರಿದಂತೆ ರಾಜ್ಯದ ಹಲವು ಕಡೆ ಮುಂದಿನ 1 ವಾರ ಭಾರೀ ಮಳೆ-ಹವಾಮಾನ ಇಲಾಖೆ

ಮಂಗಳೂರು/ಉಡುಪಿ: ಮುಂದಿನ ಒಂದು ವಾರಗಳ ಕಾಲ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿ ಕರಾವಳಿ ಪ್ರದೇಶದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಶನಿವಾರ (ಆ.01) ಮುನ್ಸೂಚನೆಯನ್ನು ನೀಡಿದೆ.

Sponsored

ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಶುಕ್ರವಾರ ಭಾರೀ ಮಳೆ ಉಂಟಾದ ಪರಿಣಾಮ ಕುಮಾರಧಾರಾ ನದಿ ತುಂಬಿ ಹರಿಯುತ್ತಿದ್ದು, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಸಮೀಪದ ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ. ಹಾಗಾಗಿ ಭಕ್ತರು ನದಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.