ಶನಿವಾರ, 24 ಅಕ್ಟೋಬರ್ 2026

ಭಾರೀ ಮಳೆಯ ಸಂಭವ, ಈ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಿದ ಹವಾಮಾನ ಇಲಾಖೆ

ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುನ್ನಚ್ಚರಿಕೆಯ ಕ್ರಮವಾಗಿ ಪ್ರಮುಖ ಜಿಲ್ಲೆಗಳಿಗೆ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಯಾವೆಲ್ಲ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ?
ಕರಾವಳಿ ಮತ್ತು ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಅತಿ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಜಾಗ್ರತೆ ವಹಿಸಲು ಸೂಚಿಸಲಾಗಿದೆ. ಉತ್ತರಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಆರೆಂಜ್‌ ಅಲರ್ಟನ್ನು ಈ ಜಿಲ್ಲೆಗಳಿಗೆ ನೀಡಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹಾಗೂ ಸಾರ್ವಜನಿಕರು ನದಿ, ಜಲಪಾತಗಳ ಬಳಿ ಹೋಗದಂತೆ ಮತ್ತು ಹಳೆಯ ಮರಗಳು ಹಾಗೂ ವಿದ್ಯುತ್‌ ಕಂಬಗಳ ಬಳಿ ನಿಲ್ಲದಂತೆ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.

ಯೆಲ್ಲೋ ಅಲರ್ಟ್‌!
ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಯೆಲ್ಲೋ ಅಲರ್ಟ್​ ನೀಡಲಾಗಿದೆ.