

School Holiday: ಮಂಗಳೂರು/ಬಂಟ್ವಾಳ: ತಾಲೂಕಿನಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವ ಕಾರಣ ಮುಂಜಾಗೃತ ಕ್ರಮವಾಗಿ ಮಂಗಳೂರು ತಾಲೂಕಿನ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು (12 ನೇ ತರಗತಿಯವರೆಗೆ) ಜು.19 ರ ಶನಿವಾರ ರಜೆ ಘೋಷಣೆ ಮಾಡಿ ಮಂಗಳೂರು ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಾದ್ಯಂತ ಮಳೆ ಎಡೆಬಿಡದೆ ಸುರಿಯುತ್ತಿರುವ ಕಾರಣ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜು.19 ರ ಶನಿವಾರ ರಜೆ ಘೋಷಣೆ ಮಾಡಿ ಬಂಟ್ವಾಳ ತಹಶೀಲ್ದಾರ್ ಆದೇಶ ಮಾಡಿದ್ದಾರೆ.
ಉಳ್ಳಾಲ ತಾಲೂಕಿನಾದ್ಯಂತ ವ್ಯಾಪಕ ಮಳೆ ಸುರಿಯುತ್ತಿರುವ ಕಾರಣ ಮುಂಜಾಗೃತ ಕ್ರಮವಾಗಿ ಉಳ್ಳಾಲ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜು.19 ಶನಿವಾರ ರಜೆ ಘೋಷಣೆ ಮಾಡಿ ಉಳ್ಳಾಲ ತಹಶೀಲ್ದಾರ್ ಆದೇಶ ಮಾಡಿದ್ದಾರೆ.














