ಶನಿವಾರ, 24 ಅಕ್ಟೋಬರ್ 2026

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವಾಂತರ, ಸೋಜಾ ಎಲೆಕ್ಟ್ರಾನಿಕ್ಸ್‌ಗೆ ನುಗ್ಗಿದ ಮಳೆನೀರು

ಬೆಳ್ತಂಗಡಿ: ಗ್ರಾಹಕರಿಗೆ ವಿಶ್ವಾಸಕ್ಕೆ ಪಾತ್ರವಾಗಿದ್ದ ಹೆಸರಾಂತ ಸೋಜಾ ಎಲೆಕ್ಟ್ರಾನಿಕ್ಸ್ ಅಂಡ್ ಫರ್ನೀಚರ್ಸ್ ಮಳಿಗೆಗೆ ಹೆದ್ದಾರಿಯ ಕಾಮಗಾರಿಯಿಂದ ಚರಂಡಿ ಬ್ಲಾಕ್ ಆಗಿ ಮಳೆ ನೀರು ನುಗ್ಗಿ ಲಕ್ಷಾಂತರ ಮೌಲ್ಯದ ಗೃಹೋಪಯೋಗಿ ವಸ್ತುಗಳಿಗೆ ಹಾನಿಯಾದ ಘಟನೆ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಹಿನ್ನೆಲೆಯಲ್ಲಿ ಹಳೆಯ ಚರಂಡಿಗಳನ್ನು ಮುಚ್ಚಿರುವುದರಿಂದ ಮಳೆ ನೀರು ಸರಾಗವಾಗಿ ಹರಿದುಹೋಗಲು ಸಾಧ್ಯವಾಗದೆ, ರಸ್ತೆಯಲ್ಲೇ ನದಿಯಂತೆ ಹರಿದಿದೆ. ಈ ನೀರು ಸೋಜಾ ಎಲೆಕ್ಟ್ರಾನಿಕ್ಸ್ ಆ್ಯಂಡ್ ಫರ್ನಿಚರ್ನ್ ಮಳಿಗೆಗೆ ನುಗ್ಗಿದ ಪರಿಣಾಮ ಅಂಗಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಎಲೆಕ್ಟ್ರಾನಿಕ್ಸ್ ಉಪಕರಣಗಳು, ಮರದ ಪೀಠೋಪಕರಣಗಳು ಹಾಗೂ ಇತರ ಗ್ರಹೋಪಯೋಗಿ ವಸ್ತುಗಳಿಗೆ ಹಾನಿಯಾಗಿದೆ.

ಕಷ್ಟಪಟ್ಟು ಬೆಳೆಸಿದ ಸಂಸ್ಥೆಗೆ ಮಳೆ ನೀರಿನಿಂದ ಉಂಟಾದ ನಷ್ಟವನ್ನು ಕಂಡು ಸಂಸ್ಥೆಯ ಮಾಲಕರು ಕಣ್ಣೀರಿಟ್ಟಿದ್ದಾರೆ.

ಹೆದ್ದಾರಿ ಕಾಮಗಾರಿಯ ವೇಳೆ ಚರಂಡಿ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸದಿರುವುದೇ ಈ ಅವಾಂತರಕ್ಕೆ ಕಾರಣವಾಗಿದೆ ಎಂದು ಅವರು ಅಳಲು ತೋಡಿಕೊಂಡಿದ್ದಾರೆ.ಭಾರಿ ಮಳೆಯಿಂದಾಗಿ ಮಳಿಗೆಗೆ ನೀರು ನುಗ್ಗಿ ಅಪಾರ ನಷ್ಟ ಸಂಭವಿಸಿರುವುದರಿಂದ ವ್ಯಾಪಾರಸ್ಥರು ಆತಂಕಕ್ಕೊಳಗಾಗಿದ್ದಾರೆ..

ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಮಳೆ ನೀರು ಸರಾಗವಾಗಿ ಹರಿದುಹೋಗಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಕೇಳಿಬಂದಿದೆ.