ಶನಿವಾರ, 24 ಅಕ್ಟೋಬರ್ 2026

ಭಾರೀ ಮಳೆ – ಅಂಗನವಾಡಿ, ಪ್ರಾಥಮಿಕ ಶಾಲೆಗಳಿಗೆ ರಜೆ

ರಾಜ್ಯದಲ್ಲಿ ಬರಗಾಲ ಆವರಿಸುತ್ತದೆ ಎಂಬ ಭೀತಿಯ ನಡುವೆ ಕೂಡ ಕರಾವಳಿ ಹಾಗೂ ಮಲೆನಾಡಿನ ಕೆಲವೇಡೆ ಭಾರಿ ಮಳೆ ಆಗುತ್ತಿದೆ. ಕಾಫಿನಾಡ ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆ ಸುರಿಯುತ್ತಿರುವ ಹಿನ್ನೆಲೆ ಮೂಡಿಗೆರೆ ತಾಲೂಕಿನ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.

ಭಾನುವಾರ ಮಧ್ಯಾಹ್ನದಿಂದ ಮಲೆನಾಡಲ್ಲಿ ಭಾರೀ ಗಾಳಿ ಸಹಿತ ಮಳೆ ಸುರಿಯುತ್ತಿದೆ. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಮೂಡಿಗೆರೆ ತಾಲೂಕಿನ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಿಸಿ ಮೂಡಿಗೆರೆ ತಹಶೀಲ್ದಾರ್ ಅಶ್ವಿನಿ ಆದೇಶ ಹೊರಡಿಸಿದ್ದಾರೆ.