ಶನಿವಾರ, 24 ಅಕ್ಟೋಬರ್ 2026

ರಾಜ್ಯದಲ್ಲಿ ಮುಂದಿನ 3 ದಿನ ವರುಣಾರ್ಭಟ; ಕರಾವಳಿಗೆ ರೆಡ್‌ ಅಲರ್ಟ್‌

Monsoon Rain

ಕರ್ನಾಟಕದಾದ್ಯಂತ ಮುಂದಿನ ಕೆಲವು ದಿನ ವರುಣಾರ್ಭಟ ಹೆಚ್ಚಾಗಲಿದ್ದು, ಹವಾಮಾನ ಇಲಾಖೆಯು ರಾಜ್ಯದ ವಿವಿಧ ಜಿಲ್ಲೆಗಳಿಗೆ ಹೈ ಅಲರ್ಟ್‌ ನೀಡಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಮುಂದಿನ ಮೂರು ದಿನಗಳ ಕಾಲ ರೆಡ್‌ ಅಲರ್ಟ್‌ ಸೂಚಿಸಲಾಗಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ್‌, ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಮಲೆನಾಡು ಮತ್ತು ಕರಾವಳಿ ಭಾಗದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಆರೆಂಜ್‌ ಅಲರ್ಟ್‌ ನೀಡಲಾಗಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜುಲೈ 6ರಿಂದ 8 ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.