Home News Karnataka BJP: ವಿಜಯೇಂದ್ರಗೆ ಹೈಕಮಾಂಡ್ ಬಿಗ್ ಶಾಕ್ ?! ಹೊಸ ವರ್ಷಕ್ಕೆ ರಾಜ್ಯ ಬಿಜೆಪಿಗೆ...

Karnataka BJP: ವಿಜಯೇಂದ್ರಗೆ ಹೈಕಮಾಂಡ್ ಬಿಗ್ ಶಾಕ್ ?! ಹೊಸ ವರ್ಷಕ್ಕೆ ರಾಜ್ಯ ಬಿಜೆಪಿಗೆ ಹೊಸ ರಾಜ್ಯಾಧ್ಯಕ್ಷ !!

Hindu neighbor gifts plot of land

Hindu neighbour gifts land to Muslim journalist

Karnataka BJP: ರಾಜ್ಯ ಬಿಜೆಪಿಯಲ್ಲಿ ಬಣಗಳು ಉಲ್ಬಣಗೊಂಡ ಹಿನ್ನೆಲೆಯಲ್ಲಿ ಹಾಗೂ ಪ್ರಸ್ತುತ ಅಧ್ಯಕ್ಷ ಬಿ ವೈ ವಿಜಯೇಂದ್ರ ಅವರ ವಿರುದ್ಧ ಕೆಲ ನಾಯಕರು ಅಸಮಧಾನ ಹೊರಹಾಕುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ(Karnataka BJP)ಸ್ಥಾನ ಜನವರಿಯಲ್ಲಿ ಬದಲಾಗುವ ನಿರೀಕ್ಷೆ ಇದೆ ಎಂದು ತಿಳಿದು ಬಂದಿದೆ. ಈ ಕುರಿತು ಮಾಜಿ ಸಚಿವ ಕುಮಾರ್ ಬಂಗಾರಪ್ಪ (Kumar Bangarappa) ಅಭಿಪ್ರಾಯಪಟ್ಟಿದ್ದಾರೆ.

ಹೌದು, ರಾಜ್ಯ ಬಿಜೆಪಿಯಲ್ಲಿನ ಬಣಬಡಿದಾಟ, ಪಕ್ಷದ ನಾಯಕತ್ವದ ವಿರುದ್ಧ ರೆಬಲ್ ನಾಯಕರ ನಡೆ ವಿಚಾರವಾಗಿ ಇತ್ತೀಚೆಗೆ ಹೈಕಮಾಂಡ್​ ಕೋರ್ ಕಮಿಟಿ ಸಭೆ ಮಾಡಿ ಒಟ್ಟಾಗಿರುವಂತೆ ರಾಜ್ಯ ಬಿಜೆಪಿ ನಾಯಕರಿಗೆ ಕಿವಿ ಹಿಂಡಿತ್ತು. ಇದೀಗ ಮತ್ತೆ ರೆಬಲ್ ನಾಯಕರ ಟೀಂನ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಜನವರಿಯಲ್ಲಿ ತಮ್ಮ ಸ್ಥಾನದಿಂದ ಬದಲಾಗಲಿದ್ದಾರೆಂದು ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕುಮಾರ್ ಬಂಗಾರಪ್ಪ ಅವರು, ಬಿಜೆಪಿ ರಾಷ್ಟ್ರಾಧ್ಯಕ್ಷರು ಮೋದಿ ಸರ್ಕಾರದಲ್ಲಿ ಸಚಿವರಾಗಿದ್ದರಿಂದ ರಾಷ್ಟ್ರಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷರು ಮತ್ತು ರಾಜ್ಯಾಧ್ಯಕ್ಷರ ಸ್ಥಾನ ಖಾಲಿಯಾಗುವ ನಿರೀಕ್ಷೆ ಇದೆ. ನಾನು ಸಹ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಎಂದು ಹೇಳಿದರು.

ಅಲ್ಲದೆ ಕಳೆದ 30 ವರ್ಷದಿಂದ ರಾಜಕಾರಣದಲ್ಲಿ ಇದ್ದೇನೆ. ಕಾಂಗ್ರೆಸ್ ಅಹಿಂದ ಸಂಘಟನೆಯಾಗಿದ್ದು, ಅದಕ್ಕೆ ವಿರುದ್ಧವಾಗಿ ಹಾಗೂ ಬಿಜೆಪಿ ಒಬಿಸಿ ಸಂಘಟನೆಗೆ ಹೆಚ್ಚು ಒತ್ತು ನೀಡುವ ಸಲುವಾಗಿ ಒಬಿಸಿ ನಾಯಕರಿಗೆ ಹೆಚ್ಚು ಒತ್ತು ನೀಡಬೇಕಾಗಿದೆ. ಒಬಿಸಿ ಸಮುದಾಯಕ್ಕೆ ರಾಜ್ಯಾಧ್ಯಕ್ಷ ಸ್ಥಾನ ನೀಡುವ ವಿಚಾರ ಬಂದರೆ ನನ್ನನ್ನು ಪರಿಗಣಿಸಿ ಎಂದಿದ್ದೇನೆ. ಜನವರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗಬಹುದು ಎಂಬ ನಿರೀಕ್ಷೆ ಇದೆ. ಏನು ಆಗಲಿದೆ ಕಾದು ನೋಡಬೇಕಿದೆ ಎಂದು ತಿಳಿಸಿದರು.