Home » ಶ್ರೀಕಾಂತ್‌ ಶೆಟ್ಟಿ ಭಾಷಣಕ್ಕೆ ಹೈಕೋರ್ಟ್‌ ಷರತ್ತುಬದ್ಧ ಅನುಮತಿ

ಶ್ರೀಕಾಂತ್‌ ಶೆಟ್ಟಿ ಭಾಷಣಕ್ಕೆ ಹೈಕೋರ್ಟ್‌ ಷರತ್ತುಬದ್ಧ ಅನುಮತಿ

0 comments

ಹಿಂದೂ ಜಾಗರಣ ವೇದಿಕೆಯ ದಕ್ಷಿಣ ಪ್ರಾಂತ ಕಾರ್ಯಕಾರಿಣಿ ಸದಸ್ಯ ಶ್ರೀಕಾಂತ್‌ ಶೆಟ್ಟಿ ಕಾರ್ಕಳ ಭಾಷಣಕ್ಕೆ ಕಲಬುರಗಿ ಹೈಕೋರ್ಟ್‌ ಷರತ್ತುಬದ್ಧ ಅನುಮತಿ ನೀಡಿದೆ.

ನ್ಯಾಯಾಲಯದ ಷರತ್ತುಗಳಂತೆ ಅ.1 ರಂದು ರಾತ್ರಿ 8.45 ರೊಳಗೆ ಕಾರ್ಯಕ್ರಮ ಮುಕ್ತಾಯಗೊಳಿಸಬೇಕು. ಕಾರ್ಯಕ್ರಮದಲ್ಲಿ ಯಾವುದೇ ರೀತಿಯ ಪ್ರಚೋದನಕಾರಿ ಭಾಷಣ ಮಾಡಬಾರದು ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವಂತಹ ಯಾವುದೇ ಕೃತ್ಯಕ್ಕೆ ಅವಕಾಶ ನೀಡಬಾರದು ಎಂದು ಷರತ್ತು ವಿಧಿಸಲಾಗಿದೆ.

ಈ ಮೂಲಕ ಹಿಂದೂ ಮಹಾಗಣಪತಿ ಉತ್ಸವದ ವೇದಿಕೆಯಲ್ಲಿ ಶ್ರೀಕಾಂತ್‌ ಶೆಟ್ಟಿ ಕಾರ್ಕಳ ಭಾಷಣಕ್ಕೆ ನ್ಯಾಯಾಲಯ ಅನುಮತಿ ನೀಡಿದೆ. ಕಾರ್ಯಕ್ರಮ ಆಯೋಜಕರು ಹಾಗೂ ಭಾಷಣಕಾರರು ನ್ಯಾಯಾಲಯ ವಿಧಿಸಿರುವ ಷರತ್ತುಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಾಗಿದೆ.

You may also like