ಬೆಂಗಳೂರು: ರಾಜ್ಯ ಸರಕಾರ ಸುಮಾರು 15 ಸಾವಿರ ಶಿಕ್ಷಕರ ನೇಮಕಾತಿಗೆ ಹೊರಡಿಸಿರುವ ಅಧಿಸೂಚನೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ.
Sponsoredಆ.11 ರಂದು ಸರಕಾರ ಹೊರಡಿಸಿರುವ ನೇಮಕಾತಿ ಅಧಿಸೂಚನೆ ಪ್ರಶ್ನಿಸಿ ಹುಬ್ಬಳ್ಳಿಯ ಉರ್ದು ಭಾಷಾ ಶಿಕ್ಷಕಿ ಅಸ್ಮಾ ಘೋರಿ ಮತ್ತಿತರರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರ ಪೀಠ ಈ ನಿರ್ದೇಶನ ನೀಡಿದೆ.




