Home latest ಹಣೆಗೆ ಕುಂಕುಮ ಇಟ್ಟುಕೊಂಡು ಬಂದ ವಿದ್ಯಾರ್ಥಿಗೆ ಕಾಲೇಜು ಪ್ರವೇಶ ನಿರಾಕರಣೆ| ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಮಧ್ಯೆ...

ಹಣೆಗೆ ಕುಂಕುಮ ಇಟ್ಟುಕೊಂಡು ಬಂದ ವಿದ್ಯಾರ್ಥಿಗೆ ಕಾಲೇಜು ಪ್ರವೇಶ ನಿರಾಕರಣೆ| ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಮಧ್ಯೆ ವಾಕ್ಸಮರ

Hindu neighbor gifts plot of land

Hindu neighbour gifts land to Muslim journalist

ಹಿಜಾಬ್ ವಿವಾದ ಈಗ ಹಿಜಾಬ್ vs ಸಿಂಧೂರಕ್ಕೆ ತಿರುಗಿದೆ.

ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಕಾಲೇಜುಗಳಲ್ಲಿ ಸಿಂಧೂರ ಹಾಕಿಕೊಂಡು ಬಂದಿದ್ದಕ್ಕೆ ಶಿಕ್ಷಕರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಘಟನೆ ಇಂದು ನಡೆದಿದೆ.

ಇಂಡಿ ಪಟ್ಟಣದ ಸರಕಾರಿ ಪದವಿ ಕಾಲೇಜಿನಲ್ಲಿ ಹಣೆಗೆ ಕುಂಕುಮ ಹಚ್ಚಿಕೊಂಡು ಬಂದ ವಿದ್ಯಾರ್ಥಿಗೆ ಈ ರೀತಿ ಹೇಳಲಾಗಿದೆ.

ಕುಂಕುಮ ಇಟ್ಟುಕೊಂಡು ಬಂದ ವಿದ್ಯಾರ್ಥಿಗೆ ಕುಂಕುಮ ಅಳಿಸಿ ಕಾಲೇಜು ಪ್ರವೇಶಿಸುವಂತೆ ಉಪನ್ಯಾಸಕರು ಹೇಳಿದಾಗ, ಇದನ್ನು ಒಪ್ಪದ ವಿದ್ಯಾರ್ಥಿಗೆ ಕಾಲೇಜು ಪ್ರವೇಶ ನಿರಾಕರಿಸಲಾಗಿದೆ.

ಈ ಕಾಲೇಜಿನ ದೈಹಿಕ ಶಿಕ್ಷಕರೊಬ್ಬರು ಹಿಜಾಬ್ ಧರಿಸುವುದಕ್ಕೆ ವಿರೋಧ ಇರುವಾಗ, ಸಿಂಧೂರ ಹಚ್ಚಿಕೊಂಡು ಬರುವುದು ಕೂಡಾ ವಿವಾದಕ್ಕೆ ಸಮಸ್ಯೆ ಆಗುತ್ತದೆ ಎಂದು ಸಲಹೆ ನೀಡಿದಾಗ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳ ಮಧ್ಯೆ ವಾಕ್ಸಮರ ನಡೆದಿದೆ.

ನಂತರ ಸ್ಥಳಕ್ಕೆ ಪೊಲೀಸರು ಆಗಮಿಸಿ ವಿದ್ಯಾರ್ಥಿಯ ಮನವೊಲಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.