Home News Weather Forecast: ಕರ್ನಾಟಕದ ಹವಾಮಾನ ಮುನ್ಸೂಚನೆ ಹೇಗಿದೆ? ಎಲ್ಲೆಲ್ಲಾ ಮಳೆ ಸಂಭವ?

Weather Forecast: ಕರ್ನಾಟಕದ ಹವಾಮಾನ ಮುನ್ಸೂಚನೆ ಹೇಗಿದೆ? ಎಲ್ಲೆಲ್ಲಾ ಮಳೆ ಸಂಭವ?

Weather Forecast

Hindu neighbor gifts plot of land

Hindu neighbour gifts land to Muslim journalist

Weather Forecast: ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ(Coastal) ಜೆಲ್ಲೆಗಳಾದ್ಯಂತ ಬಿಟ್ಟು ಬಿಟ್ಟು ಮಳೆಯ(Rain) ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ(Forcast) ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.

ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ( ಪೂರ್ವದ ಮೋಡದಿಂದ, ಗುಡುಗು ಸಾಧ್ಯತೆಯೂ ಇದೆ)

ಹಾವೇರಿ, ಧಾರವಾಡ, ಬೆಳಗಾವಿ, ಗದಗ, ಚಿತ್ರದುರ್ಗ, ದಾವಣಗೆರೆ, ಕೊಪ್ಪಳ, ವಿಜಯಪುರ, ಕಲಬುರ್ಗಿ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆ ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ(Cloudy weather) ಮುನ್ಸೂಚೆನೆ ಇದೆ.

ಈಗಿನಂತೆ ಗುಜರಾತ್(Gujarat) ವಾಯುಭಾರ ಕುಸಿತದ ಚಲನೆಯು(movement of the depression) ನಿಧಾನವಾಗುತ್ತಿದ್ದು, ಆಗಸ್ಟ್ 30ರಂದು ಅರಬ್ಬಿ ಸಮುದ್ರಕ್ಕೆ(Arabian Sea) ಪ್ರವೇಶಿಸುತ್ತಿದ್ದಂತೆಯೇ ದುರ್ಬಲಗೊಳ್ಳವ(to weaken) ಲಕ್ಷಣಗಳಿವೆ. ಇದೇ ಸಮಯದಲ್ಲಿ ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶ ಗಡಿಭಾಗದಲ್ಲಿ ಇನ್ನೊಂದು ತಿರುಗುವಿಕೆ ಉಂಟಾಗುವ ಲಕ್ಷಣಗಳಿವೆ. ಸೆಪ್ಟೆಂಬರ್ 1ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಕಡಿಮೆಯಾಗುವ ಲಕ್ಷಣಗಳಿದ್ದರೂ ,ಉತ್ತರ ಭಾರತದ ಪರಿಸ್ಥಿತಿಯ ಮೇಲೆ ಅವಲಂಬಿಸಿದೆ.