Home News Karnataka BJP: ರಾಜ್ಯ ಬಿಜೆಪಿಗೆ ಹೆಚ್ಚಿದ ಆತಂಕ – ಕರ್ನಾಟಕದಲ್ಲಿ ಬಿಜೆಪಿ ಗೆಲ್ಲೋದು ಖಾಲಿ...

Karnataka BJP: ರಾಜ್ಯ ಬಿಜೆಪಿಗೆ ಹೆಚ್ಚಿದ ಆತಂಕ – ಕರ್ನಾಟಕದಲ್ಲಿ ಬಿಜೆಪಿ ಗೆಲ್ಲೋದು ಖಾಲಿ ಇಷ್ಟೇ ಸೀಟಾ?!

Karnataka BJP

Hindu neighbor gifts plot of land

Hindu neighbour gifts land to Muslim journalist

Karnataka BJP: ರಾಜ್ಯದಲ್ಲಿ ಇದೀಗ 2 ಹಂತದ ಲೋಕಸಭಾ ಚುನಾವಣೆ ಮುಕ್ತ ಮಾಯವಾಗಿದೆ. ಈ ಬೆನ್ನಲ್ಲೇ ಗೆಲ್ಲುವ ಸೀಟುಗಳ ಬಗ್ಗೆ ಪಕ್ಷಗಳಲ್ಲಿ ಚರ್ಚೆ ಶುರುವಾಗಿದೆ. ಬಿಜೆಪಿ ಅಂತೂ ಈ ಬಗ್ಗೆ ಭಾರೀ ಉತ್ಸುಕತೆ ತೋರುತ್ತಿದೆ. ಆದರೀಗ ರಾಜ್ಯದಲ್ಲಿ ನಡೆದ ಕೆಲವು ಅಹಿತಕರ ಘಟನೆಯಿಂದಾಗಿ ರಾಜ್ಯ ಬಿಜೆಪಿ(Karnataka BJP) ಗೆ ಆತಂಕ ಶುರುವಾಗಿದೆ.

ಇದನ್ನೂ ಓದಿ: 7th Pay Commission: ನಿವೃತ್ತ ಸರ್ಕಾರಿ ನೌಕರರಿಗೆ ಹೊಸ ವೇತನ ಶ್ರೇಣಿಯ ಟೆನ್ಷನ್!

ಲೋಕಸಭಾ ಚುನಾವಣೆಯ(Parliament Election) ಫಲಿತಾಂಶ ಜೂನ್ 4 ರಂದು ಪ್ರಕಟವಾಗಲಿದೆ. ಫಲಿತಾಂಶಕ್ಕಾಗಿ ಅಭ್ಯರ್ಥಿಗಳು ಕಾತುರರಾಗಿದ್ದಾರೆ. ಈ ನಡುವೆ ರಾಜ್ಯದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯದಂತ ಪ್ರಕರಣಗಳು ರಾಜ್ಯ ಬಿಜೆಪಿಯಲ್ಲಿ ಆತಂಕ ಶುರುಮಾಡಿವೆ. ಈ ಕುರಿತು ಕಳೆದ ಶನಿವಾರ ನಡೆದ ಪಕ್ಷದ ಆಂತರಿಕ ಸಭೆಯಲ್ಲಿ ಸಾಕಷ್ಟು ಚರ್ಚೆ ಹುಟ್ಟುಹಾಕಿದೆಯಂತೆ!!

ಇದನ್ನೂ ಓದಿ: Iron Content: ಆಗಾಗ ತಲೆ ತಿರುಗೋದು, ಕಣ್ಣು ಮಂಜಾಗೋದು ಆಗುತ್ತಾ? ಡೇಂಜರ್, ಇದನ್ನು ತಿನ್ನಿ ಮೊದಲು

ಹೌದು, ಚುನಾವಣೆಯ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಕೆಲವು ಜಿಲ್ಲೆಗಳ ಪದಾಧಿಕಾರಿಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಮತಗಳ ಅಂತರವನ್ನು ಕಡಿಮೆ ಮಾಡಬಹುದು ಎಂದು ವರದಿ ಮಾಡಿದ್ದಾರೆ.

 

ಅಂದಹಾಗೆ ಪಕ್ಷದ ಆಂತರಿಕ ಸಭೆಯಲ್ಲಿ ಭಾಗವಹಿಸಿದ್ದ ಪದಾಧಿಕಾರಿಗಳು ಯಾರೂ ಕೂಡ ಯಾವುದೇ ಕ್ಷೇತ್ರದಲ್ಲಿ ಬಿಜೆಪಿ ಸೋಲುವ ಭೀತಿಯನ್ನು ವ್ಯಕ್ತಪಡಿಸಿಲ್ಲ. ಆದರೆ 2019ರ ಚುನಾವಣೆಗೆ ಹೋಲಿಸಿದರೆ ಮತಗಳ ಅಂತರದಲ್ಲಿ ವ್ಯತ್ಯಾಸವಾಗಬಹುದು ಎಂದು ಅಭಿಪ್ರಾಯ ಪಟ್ಟಿದ್ದಾರೆ.

 

ಆದರೂ ಕೂಡ ಎಲ್ಲಾ ಸಮೀಕ್ಷೆಗಳ ಮೂಲಕ ಬಿಜೆಪಿ 18 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಲ್ಲಿದ್ದರೆ, ಜೆಡಿಎಸ್‌ ಎರಡು ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸದಲ್ಲಿದೆ. ಪ್ರತಿಯೊಬ್ಬ ಶಾಸಕರಿಂದಲೇ ಅವರ ಕ್ಷೇತ್ರದ ಮುನ್ನಡೆ, ಹಿನ್ನಡೆ ಸಾಧ್ಯತೆಯ ಮಾಹಿತಿ ಪಡೆಯಲಾಗಿದೆ. ಇದನ್ನು ಹೈಕಮಾಂಡ್‌ಗೆ ವರದಿ ರೂಪದಲ್ಲಿ ಈ ಕಳುಹಿಸಿಕೊಡಲಾಗುತ್ತದೆ. ಈಗಾಗಲೇ ಪಕ್ಷದ ಆಂತರಿಕ ಸಮೀಕ್ಷಾ ವರದಿ ಇದ್ದರೂ ರಾಜ್ಯ ಘಟಕದಿಂದ ವಸ್ತುಸ್ಥಿತಿಯ ವಿವರವನ್ನು ಹೈಕಮಾಂಡ್‌ ಬಯಸಿದ್ದು, ಅದರಂತೆ ಮಾಹಿತಿ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಈ ಕುರಿತು ಪಕ್ಷದ ಚುನಾವಣಾ ನಿರ್ವಹಣಾ ಸಮಿತಿಯ ಸಂಚಾಲಕ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ ಸುನೀಲ್ ಕುಮಾರ್ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

 

ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ(BY Vijayendra) ಅವರ ನೇತೃತ್ವದಲ್ಲಿ ಇಂದು ನಡೆದ ಅವಲೋಕನ ಸಭೆಯಲ್ಲಿ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್(R Ashok), ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಡಿ.ವಿ.ಸದಾನಂದ ಗೌಡ, ಜಗದೀಶ್ ಶೆಟ್ಟರ್, ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕ ವಿ.ಸುನೀಲ್ ಕುಮಾರ್ ಮತ್ತಿತರರು ಭಾಗವಹಿಸಿದ್ದರು.