Home News ‘HSRP ನಂಬರ್ ಪ್ಲೇಟ್’ ಅಳವಡಿಕೆ ಗಡುವು ಮತ್ತೆ ವಿಸ್ತರಣೆ !!

‘HSRP ನಂಬರ್ ಪ್ಲೇಟ್’ ಅಳವಡಿಕೆ ಗಡುವು ಮತ್ತೆ ವಿಸ್ತರಣೆ !!

Hindu neighbor gifts plot of land

Hindu neighbour gifts land to Muslim journalist

HSRP: 2019ರ ಏಪ್ರಿಲ್ 1ರ ಮೊದಲು ನೋಂದಾಯಿಸಲ್ಪಟ್ಟ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಕೆ ಮಾಡುವಂತೆ ಸಾರಿಗೆ ಇಲಾಖೆ ಕಡ್ಡಾಯಗೊಳಿಸುವಂತೆ 2023ರ ಆಗಸ್ಟ್‌ನಲ್ಲಿ ಅಧಿಸೂಚನೆ ಹೊರಡಿಸಿತ್ತು. ಇದೀಗ ರಾಜ್ಯ ಸರ್ಕಾರದಿಂದ ವಾಹನ ಮಾಲೀಕರಿಗೆ ಬಿಗ್ ರಿಲೀಫ್ ಎನ್ನುವಂತೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಯ ಗಡುವನ್ನು ಮತ್ತೆ ವಿಸ್ತರಣೆ ಮಾಡಿದೆ.

ಈವರೆಗೂ ರಾಜ್ಯ ಸಾರಿಗೆ ಇಲಾಖೆಯಿಂದ 6 ಬಾರಿ ಗಡುವು ವಿಸ್ತರಣೆ ಮಾಡಲಾಗಿದೆ. ಇಷ್ಟು ಬಾರಿ ವಿಸ್ತರಣೆ ಆದರೂ ಕೂಡ ಇನ್ನೂ ಸಹ ಸಂಪೂರ್ಣವಾಗಿಲ್ಲ. ಯಾಕೆಂದರೆ ತುಂಬಾ ವಾಹನಗಳು ಇರುವುದರಿಂದ ಸಮಯ ಸಾಕಾಗುತ್ತಿಲ್ಲ ಎನ್ನುವ ಕೂಗುಗಳು ಕೇಳಿಬರುತ್ತಿವೆ. ಹೀಗಾಗಿ ಮತ್ತೆ ಗಡುವು ವಿಸ್ತರಿಸುವಂತೆ ಮನವಿ ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ದಿನಾಂಕ 31-03-2025ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ. ಉಳಿದಂತೆ ದಿನಾಂಕ 17-08-2023ರಲ್ಲಿ ಹೊರಡಿಸಿದಂತ ಆದೇಶದಲ್ಲಿ ಬೇರೆ ಯಾವುದೇ ಬದಲಾವಣೆ ಇರುವುದಿಲ್ಲ ಅಂತ ತಿಳಿಸಿದೆ.