ಶನಿವಾರ, 24 ಅಕ್ಟೋಬರ್ 2026

ಹುಬ್ಬಳ್ಳಿ: ಖಾಸಗಿ ಬಸ್ ಹಾಗೂ ಲಾರಿ ನಡುವೆ ಅಪಘಾತ | 8 ಮಂದಿ ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ

ಹುಬ್ಬಳ್ಳಿ: ಖಾಸಗಿ ಬಸ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ 8 ಮಂದಿ ಸಾವನ್ನಪ್ಪಿದ ಘಟನೆ ಸೋಮವಾರ ತಡರಾತ್ರಿ ಹುಬ್ಬಳ್ಳಿ-ಪೂನಾ ರಸ್ತೆಯಲ್ಲಿ ನಡೆದಿದೆ.

ಹುಬ್ಬಳ್ಳಿಯಿಂದ ಮಹಾರಾಷ್ಟ್ರಕ್ಕೆ ಬಸ್ ಹೋಗುತ್ತಿದ್ದ ವೇಳೆ ಲಾರಿಯನ್ನು ಓವರ್ ಟೇಕ್ ಮಾಡಲು ಹೋಗಿ ಈ ಅವಘಡ ಸಂಭವಿದೆ. ಘಟನೆಯಲ್ಲಿ ಐವರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಹುಬ್ಬಳ್ಳಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ