ಶುಕ್ರವಾರ, 6 ನವೆಂಬರ್ 2026

LPG ನಿಯಮದಲ್ಲಿ ಭಾರೀ ದೊಡ್ಡ ಬದಲಾವಣೆ – ಇನ್ಮುಂದೆ ಇವರಿಗೆ ಸಿಗಲ್ಲ ಸಿಲಿಂಡರ್

Advertisement
Advertisement

ಪಶ್ಚಿಮ ಏಷ್ಯಾದ ರಾಷ್ಟ್ರಗಳಲ್ಲಿ ಉಂಟಾಗಿರುವ ಯುದ್ಧದ ವಾತಾವರಣದಿಂದಾಗಿ ಜಗತ್ತಿನಾದ್ಯಂತ ಎಲ್ ಪಿ ಜಿ ಸಮಸ್ಯೆ ದೊಡ್ಡ ಮಟ್ಟದಲ್ಲಿ ಉಂಟಾಗಿದೆ. ಭಾರತದಲ್ಲಿ ಇನ್ನೂ ಇದರ ಸಮಸ್ಯೆಗೆ ಅಂತ್ಯ ದೊರಕಿಲ್ಲ. ಈ ನಡುವೆ ಕೇಂದ್ರ ಸರ್ಕಾರದಿಂದ ಎಲ್‌ಪಿಜಿ ಸಿಲಿಂಡರ್ ಕುರಿತು ಹೊಸ ನಿಯಮ ಜಾರಿಯಾಗಿದ್ದು ಪಿಎನ್‌ಜಿ ಸಂಪರ್ಕ ಹೊಂದಿರುವ ಗ್ರಾಹಕರಿಗೆ ಎಲ್‌ಪಿಜಿ ಸಿಲಿಂಡರ್ ವಿತರಣೆಯನ್ನು ತಕ್ಷಣದಿಂದಲೇ ಸ್ಥಗಿತಗೊಳಿಸಲು ಸರ್ಕಾರ ನಿರ್ಧರಿಸಿದೆ.

Sponsored

ಗಂಭೀರ ಪರಿಸ್ಥಿತಿಯನ್ನು ನಿಭಾಯಿಸಲು ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಕಠಿಣ ತೀರ್ಮಾನವೊಂದನ್ನು ಕೈಗೊಂಡಿದೆ. ಹೊಸ ನಿಯಮವನ್ನು ತಕ್ಷಣದಿಂದಲೇ ಜಾರಿಗೆ ತರಲಾಗಿದ್ದು, ಗ್ಯಾಸ್ ಪೈಪ್‌ಲೈನ್ ಸಂಪರ್ಕ ಹೊಂದಿರುವ ದೇಶದ ಕೋಟ್ಯಂತರ ಗ್ರಾಹಕರಿಗೆ ಇನ್ಮುಂದೆ ಎಲ್‌ಪಿಜಿ ಸಿಲಿಂಡರ್ ವಿತರಣೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲು ಆದೇಶಿಸಲಾಗಿದೆ.

Advertisement
Advertisement

ಒಟ್ಟಾರೆ ದೇಶಾದ್ಯಂತ ‘ಒಂದೇ ಮನೆಗೆ ಒಂದೇ ಗ್ಯಾಸ್ ಕನೆಕ್ಷನ್’ ಎಂಬ ಹೊಸ ನಿಯಮವನ್ನು ಜಾರಿಗೆ ತರಲಾಗುತ್ತಿದ್ದು, ಪೈಪ್ಡ್ ನ್ಯಾಚುರಲ್ ಗ್ಯಾಸ್ (PNG) ಸಂಪರ್ಕ ಹೊಂದಿರುವ ಕುಟುಂಬಗಳು ತಮ್ಮ ಬಳಿ ಇರುವ ಎಲ್‌ಪಿಜಿ (LPG) ಸಿಲಿಂಡರ್‌ಗಳನ್ನು ಕಡ್ಡಾಯವಾಗಿ ಹಿಂತಿರುಗಿಸಬೇಕೆಂದು ಕೇಂದ್ರ ಸರ್ಕಾರ ಆದೇಶಿಸಿದೆ. 

Advertisement

ಸೋಮವಾರವಷ್ಟೇ ಕೇಂದ್ರ ಸರ್ಕಾರದ ವತಿಯಿಂದ ಈ ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸಲಾಗಿದ್ದು, ತಕ್ಷಣದಿಂದಲೇ ಇದು ಜಾರಿಗೆ ಬಂದಿದೆ. ಹೊಸ ಆದೇಶದ ಪ್ರಕಾರ, ಯಾವ ಗ್ರಾಹಕರ ಮನೆಯಲ್ಲಿ ಈಗಾಗಲೇ ಪೈಪ್‌ಲೈನ್ ಮೂಲಕ ನೈಸರ್ಗಿಕ ಅನಿಲ (PNG – Piped Natural Gas) ಸರಬರಾಜು ಆಗುತ್ತಿದೆಯೋ, ಅಂತಹ ಗ್ರಾಹಕರಿಗೆ ಇನ್ಮುಂದೆ ಎಲ್‌ಪಿಜಿ (LPG) ಗ್ಯಾಸ್ ಸಿಲಿಂಡರ್‌ಗಳ ವಿತರಣೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. 

Advertisement
Advertisement