Home News Dakshina Kannada: ಹಿಂದೂಗಳ ಮನೆಗೆ ರಾತ್ರಿ ಭೇಟಿ: ಮಂಗಳೂರು ಪೊಲೀಸರ ವಿರುದ್ಧ ಮಾನವ ಹಕ್ಕುಗಳ ಆಯೋಗ...

Dakshina Kannada: ಹಿಂದೂಗಳ ಮನೆಗೆ ರಾತ್ರಿ ಭೇಟಿ: ಮಂಗಳೂರು ಪೊಲೀಸರ ವಿರುದ್ಧ ಮಾನವ ಹಕ್ಕುಗಳ ಆಯೋಗ ಆದೇಶ

Hindu neighbor gifts plot of land

Hindu neighbour gifts land to Muslim journalist

Dakshina Kannada: ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಹಿಂದೂ ಕಾರ್ಯಕರ್ತರ ಮನೆಗಳಿಗೆ ಇತ್ತೀಚೆಗೆ ಪೊಲೀಸರು ರಾತ್ರಿ ಭೇಟಿ ನೀಡುತ್ತಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಸಮಗ್ರ ತನಿಖೆ ನಡೆಸಿ ಎರಡು ವಾರಗಳಲ್ಲಿ ವರದಿ ಸಲ್ಲಿಸುವಂತೆ ರಾಜ್ಯ ಪೊಲೀಸ್‌ ಮಹಾನಿರ್ದೇಶಕರಿಗೆ ರಾಷ್ಟ್ರೀಯ ಮಾನವ ಹಕ್ಕು ಆಯೋಗ (National Human Rights Commission) ಆದೇಶ ಮಾಡಿದೆ.

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಡಾ.ವೈ.ಭರತ್‌ ಶೆಟ್ಟಿ ಅವರು ಈ ಕುರಿತು ಮಾನವ ಹಕ್ಕುಗಳ ಆಯೋಗಕ್ಕೆ ದೂರನ್ನು ನೀಡಿದ್ದರು. ದೂರು ದಾಖಲಿಸಿದ ರಾಷ್ಟ್ರೀಯ ಮಾನವ ಹಕ್ಕು ಆಯೋಗ ರಾಜ್ಯ ಡಿಜಿ&ಐಜಿಪಿಗೆ ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಸೂಚನೆ ನೀಡಿದೆ.