ಸೋಮವಾರ, 26 ಅಕ್ಟೋಬರ್ 2026
Trending

ವಾಣಿಜ್ಯ ಸಿಲಿಂಡರ್‌ ಬೇಕಿದ್ದರೆ ಕೂಡಲೇ ಈ ಕೆಲಸ ಮಾಡಿ

 

Sponsored

ಕರ್ನಾಟಕದಲ್ಲಿ ವಾಣಿಜ್ಯ ಸಿಲಿಂಡರ್‌ಗಳ ಸಮಸ್ಯೆ ಹಿನ್ನೆಲೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಕಚೇರಿಯಲ್ಲಿ ಸಚಿವ ಕೆ.ಎಚ್‌ ಮುನಿಯಪ್ಪ ಅವರು ಅಧಿಕಾರಿಗಳ ಜೊತೆ ಸಭೆ ನಡೆಸಿದ್ದು, ಐಓಸಿ, ಹೆಚ್‌ಪಿ, ಗೈಲ್‌ ಮತ್ತು ಭಾರತ್‌ ಪೆಟ್ರೋಲಿಯಂ ಕಂಫನಿಗಳ ಅಧಿಕಾರಿಗಳ ಜೊತೆ ಸಭೆ ಮಾಡಿದ್ದು, ಇದರಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.

ಕೇಂದ್ರ ಸರ್ಕಾರ ಹೆಚ್ಚುವರಿ 20% ಸಿಲಿಂಡರ್‌ಗಳನ್ನು ಪೂರೈಸಲು ಒಪ್ಪಿಗೆ ನೀಡಿದೆ ಎಂದು ಸಚಿವ ಮುನಿಯಪ್ಪ ತಿಳಿಸಿದ್ದಾರೆ. ಆದರೆ, ಬ್ಲಾಕ್​​​ನಲ್ಲಿ ಮಾರಾಟ ಮಾಡುವುದನ್ನು ಹಾಗೂ ಅಧಿಕೃತವಲ್ಲದ ಮಾರುಕಟ್ಟೆಗೆ ಸಿಲಿಂಡರ್‌ಗಳು ಹೋಗುವುದನ್ನು ತಡೆಯಲು ಕೇಂದ್ರವು ನಿರ್ಣಯ ಕೈಗೊಂಡಿದೆ. ಅದರಂತೆ, ಎಲ್ಲಾ ವಾಣಿಜ್ಯ ಬಳಕೆದಾರರು, ಮುಖ್ಯವಾಗಿ ಹೋಟೆಲ್‌ಗಳು, ಒಂದು ವಾರದೊಳಗೆ GAIL ಕಂಪನಿಯೊಂದಿಗೆ ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು. ನೋಂದಣಿ ಇಲ್ಲದಿದ್ದರೆ ಸಿಲಿಂಡರ್ ವಿತರಣೆ ಕಷ್ಟವಾಗಲಿದೆ. ಈ ಕ್ರಮದಿಂದ ಕಪ್ಪು ಮಾರುಕಟ್ಟೆಯನ್ನು ತಡೆಯಬಹುದು ಮತ್ತು ಮುಂದಿನ ದಿನಗಳಲ್ಲಿ GAIL ಪೈಪ್‌ಲೈನ್ ಮೂಲಕ ಹೆಚ್ಚಿನ ಪೂರೈಕೆಗೆ ಅವಕಾಶವಾಗಲಿದೆ. ಈ ಹೆಚ್ಚುವರಿ ಪೂರೈಕೆಯು ರಾಜ್ಯದಲ್ಲಿ ವಾಣಿಜ್ಯ ಬಳಕೆದಾರರ ಬೇಡಿಕೆಯನ್ನು ಪೂರೈಸಲು ಸಹಾಯಕವಾಗಲಿದೆ. ಸದ್ಯಕ್ಕೆ, ರಾಜ್ಯದಲ್ಲಿ ಸುಮಾರು 15,000 ರಿಂದ 16,000 ವಾಣಿಜ್ಯ ಸಿಲಿಂಡರ್‌ಗಳ ಬೇಡಿಕೆ ಇದೆ ಎಂದು ಅಂದಾಜಿಸಲಾಗಿದೆ.