# Sakleshpur-Subramanya Road: ಸಕಲೇಶಪುರ-ಸುಬ್ರಹ್ಮಣ್ಯ ರೋಡ್‌ ರೈಲ್ವೇ ವಿದ್ಯುದ್ದೀಕರಣ ಕಾಮಗಾರಿ: 5 ತಿಂಗಳು ಬೆಂಗಳೂರು-ಮಂಗಳೂರಿನ ರೈಲುಗಳು ರದ್ದು

- Link: https://hosakannada.com/news/indian-railways-sakaleshpur-subramanya-road-work-yeshwanthpur-mangalore-junction-train-cancelled-for-5-months/
- Published: 2025-05-17T09:04:23+00:00
- Author: ಹೊಸಕನ್ನಡ ನ್ಯೂಸ್

Sakleshpur-Subramanya Road: ಸಕಲೇಶಪುರ-ಸುಬ್ರಹ್ಮಣ್ಯ ಮಾರ್ಗದಲ್ಲಿ ಸುರಕ್ಷತೆ ಮತ್ತು ರೈಲ್ವೆ
ವಿದ್ಯುದ್ದೀಕರಣ ಕಾಮಗಾರಿ ನಡೆಯುವುದರಿಂದ ಕೆಲವು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ.
ಜೂನ್‌ 1 ರಿಂದ ನವೆಂಬರ್‌ 1 ರವರೆಗೆ ಈ ಕೆಲಸ ನಡೆಯಲಿದೆ ಎಂದು ನೈರುತ್ಯ ರೈಲ್ವೆ ಮಾಹಿತಿ ನೀಡಿದೆ.

Sponsored

> Kindly note the Cancellation of train services due to line block for safety-related
> and Railway Electrification work between Sakleshpur – Subrahmanya Road section.
> 
> ಸಕಲೇಶಪುರ – ಸುಬ್ರಹ್ಮಣ್ಯ ರೋಡ್ ಮಾರ್ಗದಲ್ಲಿ ಸುರಕ್ಷತೆ ಮತ್ತು ರೈಲ್ವೆ ವಿದ್ಯುದ್ದೀಕರಣ ಕಾಮಗಾರಿ
> ನಡೆಯಲಿರುವ ಕಾರಣದಿಂದಾಗಿ ಕೆಲವು… [pic.twitter.com/4j1BogWwKq](https://t.co/4j1BogWwKq)
> Advertisement
> Advertisement
> — South Western Railway (@SWRRLY) [May 16, 2025](https://x.com/SWRRLY/status/1923360325052891395?ref_src=twsrc%5Etfw)

ಮೇ 31 ರಿಂದ ನವೆಂಬರ್ 1 ರವರೆಗೆ ಪ್ರತಿ ಶನಿವಾರದಂದು ಸಂಚರಿಸುವ ಯಶವಂತಪುರ ಟು ಮಂಗಳೂರು ಜಂಕ್ಷನ್
ಸಾಪ್ತಾಹಿಕ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16539) ರದ್ದಾಗಲಿದೆ.

ಜೂನ್ 1 ರಿಂದ ನವೆಂಬರ್ 2 ರವರೆಗೆ ಪ್ರತಿ ಭಾನುವಾರದಂದು ಸಂಚರಿಸುವ ಮಂಗಳೂರು ಜಂಕ್ಷನ್ ಟು ಯಶವಂತಪುರ
ಸಾಪ್ತಾಹಿಕ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16540) ಸಹ ರದ್ದಾಗಲಿದೆ.

ಜೂನ್ 1 ರಿಂದ ಅಕ್ಟೋಬರ್ 30 ರವರೆಗೆ ಮಂಗಳವಾರ, ಗುರುವಾರ ಮತ್ತು ಭಾನುವಾರದಂದು ಸಂಚರಿಸುವ ಯಶವಂತಪುರ
ಟು ಮಂಗಳೂರು ಜಂಕ್ಷನ್ ಟ್ರೈನ್-ವೀಕ್ಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16575) ರದ್ದಾಗಲಿದೆ.

ಜೂನ್ 2ರಿಂದ ಅಕ್ಟೋಬರ್ 31 ರವರೆಗೆ ಸೋಮವಾರ, ಬುಧವಾರ ಮತ್ತು ಶುಕ್ರವಾರದಂದು ಸಂಚರಿಸುವ ಮಂಗಳೂರು
ಟು ಯಶವಂತಪುರ ಟಿ-ವೀಕ್ಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16576) ಸಹ ರದ್ಧಾಗಲಿದೆ.

ಜೂನ್ 2 ರಿಂದ ಅಕ್ಟೋಬರ್ 31 ರವರೆಗೆ ಸೋಮವಾರ, ಬುಧವಾರ ಮತ್ತು ಶುಕ್ರವಾರದಂದು ಸಂಚರಿಸುವ ಯಶವಂತಪುರ
ಟು ಕಾರವಾರ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16515) , ಜೂನ್ 3ರಿಂದ ನವೆಂಬರ್ 1 ರವರೆಗೆ
ಮಂಗಳವಾರ, ಗುರುವಾರ ಮತ್ತು ಶನಿವಾರದಂದು ಸಂಚರಿಸುವ ಕಾರವಾರ ಟು ಯಶವಂತಪುರ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್(
ರೈಲು ಸಂಖ್ಯೆ 16516) ರೈಲುಗಳ ಸಂಚಾರವನ್ನು ಸಹ ರದ್ದುಗೊಳಿಸಲಾಗಿದೆ ಎಂದು ನೈರುತ್ಯ ರೈಲ್ವೆ ಮಾಹಿತಿ
ತಿಳಿಸಿದೆ.

Advertisement
