Home News Karnataka Government: ಐಪಿಎಸ್‌ ಅಧಿಕಾರಿ ಡಿ ರೂಪಾಗೆ ಪ್ರಮುಖ ಹುದ್ದೆ: ರೋಹಿಣಿ ಸಿಂಧೂರಿ ಟ್ರಾನ್ಸ್‌ಫರ್‌

Karnataka Government: ಐಪಿಎಸ್‌ ಅಧಿಕಾರಿ ಡಿ ರೂಪಾಗೆ ಪ್ರಮುಖ ಹುದ್ದೆ: ರೋಹಿಣಿ ಸಿಂಧೂರಿ ಟ್ರಾನ್ಸ್‌ಫರ್‌

Hindu neighbor gifts plot of land

Hindu neighbour gifts land to Muslim journalist

Karnataka Government: ಎರಡು ವಾರದ ಹಿಂದೆ ಐಪಿಎಸ್‌ ಅಧಿಕಾರಿ ಡಿ.ರೂಪಾ ಮೌದ್ಗಿಲ್‌ ಅವರಿಗೆ ಎಡಿಜಿಪಿ ಹುದ್ದೆಗೆ ಮುಂಬಡ್ತಿ ನೀಡಿದ್ದ ಕರ್ನಾಟಕ ಸರಕಾರ ಇದೀಗ, ಬೆಂಗಳೂರು ಮೆಟ್ರೋಪಾಲಿಟನ್‌ ಟಾಸ್ಕ್‌ಫೋರ್ಸ್‌ ಎಡಿಜಿಪಿಯಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಗುರುವಾರ ಆದೇಶ ಹೊರಡಿಸಿದೆ. ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಇತರ ಕೆಲವು ಮಂದಿ ಅಧಿಕಾರಿಗಳನ್ನೂ ವರ್ಗಾವಣೆ ಮಾಡಲಾಗಿದೆ.

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಕೃಷಿ ಇಲಾಖೆಯ (ಆಹಾರ ಸಂಸ್ಕರಣೆ ಮತ್ತು ಕೊಯ್ಲು ತಂತ್ರಜ್ಞಾನ) ಕಾರ್ಯದರ್ಶಿ ಹುದ್ದೆಯಿಂದ ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಐಎಎಸ್​ ಅಧಿಕಾರಿ ಅಕ್ರಂ ಪಾಷಾ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕೆಎಸ್​ಆರ್​ಟಿಸಿ ಎಂಡಿ ಆಗಿ ನೇಮಕ ಮಾಡಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ತಿಳಿಸಿದೆ.