ಬೆಂಗಳೂರು,ಸೆ.7: ರಾಜ್ಯ ಸರಕಾರವು ಪೊಲೀಸ್ ಇಲಾಖೆಯಲ್ಲಿ ಮಹತ್ವದ ಆಡಳಿತಾತ್ಮಕ ಬದಲಾವಣೆ ಮಾಡಿದೆ. ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ವಿವಿಧ ಹುದ್ದೆಗಳಿಗೆ ನಿಯೋಜಿಸಿದೆ. ಸೆ.7 ರಂದು ಅಧಿಸೂಚನೆ ಹೊರಡಿಸಿದೆ.


ಬೆಂಗಳೂರಿನ ಅಪರಾಧ ತನಿಖಾ ವಿಭಾಗದ (ಸಿಐಡಿ) ಪೊಲೀಸ್ ಅಧೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಸ್ಯಾಮ್ ವರ್ಗೀಸ್, ಐಪಿಎಸ್ (ಕೆಎನ್ 2022) ಅವರನ್ನು ಕೂಡಲೇ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಮಂಗಳೂರು ನಗರ ಪೊಲೀಸ್ ಡಿಸಿಪಿ, ಕಾನೂನು ಮತ್ತು ಸುವ್ಯವಸ್ಥೆ ಹುದ್ದೆಗೆ ನೇಮಿಸಲಾಗಿದೆ. ಮಂಗಳೂರು ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಹೊಣೆಗಾರಿಕೆಯನ್ನು ಸ್ಯಾಮ್ ವರ್ಗೀಸ್ ಅವರ ವಹಿಸಲಿದ್ದಾರೆ.