ಮಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಜಪ್ಪಿನಮೊಗರು ಸರ್ಕಾರಿ ಶಾಲೆ ಹಾಗೂ ಲಯನ್ಸ್ ಕ್ಲಬ್ ಪಂಪ್ವೆಲ್ ಕಲ್ಪವೃಕ್ಷದ ವತಿಯಿಂದ ಜಪ್ಪಿನಮೊಗರು ಸರ್ಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
Sponsoredಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು, ಲಯನ್ಸ್ ಕ್ಲಬ್ ಪಂಪ್ವೆಲ್ ಕಲ್ಪವೃಕ್ಷದ ಅಧ್ಯಕ್ಷರು ಹಾಗೂ ಇತರ ಸದಸ್ಯರು, ವಿದ್ಯಾರ್ಥಿಗಳು, ಪೋಷಕರು ಮತ್ತು ಶಾಲೆಯ ಹಳೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಉದ್ಘಾಟನಾ ಕಾರ್ಯಕ್ರಮದ ನಂತರ ಶಾಲೆಯ ವಿದ್ಯಾರ್ಥಿಗಳು ದೇಶಭಕ್ತಿ ಮತ್ತು ಸಾಂಸ್ಕೃತಿಕ ವೈವಿಧ್ಯತೆಯನ್ನು ಬಿಂಬಿಸುವ ಸುಂದರ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ಎಲ್ಲರ ಉತ್ಸಾಹಭರಿತ ಭಾಗವಹಿಸುವಿಕೆಯಿಂದ ಕಾರ್ಯಕ್ರಮವು ಯಶಸ್ವಿಯಾಗಿ ಹಾಗೂ ಅರ್ಥಪೂರ್ಣವಾಗಿ ನೆರವೇರಿತು.




