Home News BJP Manifesto: ಮಹಿಳೆಯರಿಗೆ 2,100 ರೂ. ಜೊತೆಗೆ ವಾರ್ಷಿಕ 2 ಎಲ್‌ಪಿಜಿ ಸಿಲಿಂಡರ್‌ ಫ್ರೀ: ಬಿಜೆಪಿ...

BJP Manifesto: ಮಹಿಳೆಯರಿಗೆ 2,100 ರೂ. ಜೊತೆಗೆ ವಾರ್ಷಿಕ 2 ಎಲ್‌ಪಿಜಿ ಸಿಲಿಂಡರ್‌ ಫ್ರೀ: ಬಿಜೆಪಿ ಗ್ಯಾರಂಟಿ

BJP

Hindu neighbor gifts plot of land

Hindu neighbour gifts land to Muslim journalist

BJP Manifesto: ಮುಂಬರುವ ಜಾರ್ಖಂಡ್‌ ವಿಧಾನಸಭಾ ಚುನಾವಣೆಗೆ ಬಿಜೆಪಿ ಪ್ರಣಾಳಿಕೆಯನ್ನು (BJP Manifesto) ಕೇಂದ್ರ ಗೃಹಸಚಿವ ಅಮಿತ್‌ ಶಾ (Amit Shah) ಭಾನುವಾರ ಬಿಡುಗಡೆಗೊಳಿಸಿದ್ದು, ಜಾರ್ಖಂಡ್‌ನಲ್ಲಿ (Jharkhand) ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯದ ಪ್ರತಿಯೊಬ್ಬ ಮಹಿಳೆಗೆ ತಿಂಗಳಿಗೆ 2,100 ರೂ. ನೀಡುವುದು ಸೇರಿದಂತೆ ಹಲವು ಗ್ಯಾರಂಟಿಗಳನ್ನು ಘೋಷಣೆ ಮಾಡಲಾಗಿದೆ.

ಜಾರ್ಖಂಡ್‌ನ ಬಿಜೆಪಿ ಪ್ರಣಾಳಿಕೆ ಏನೇನಿದೆ:

ಪ್ರತಿ ಮನೆಗೆ 500 ರೂ.ಗೆ ಎಲ್‌ಪಿಜಿ ಸಿಲಿಂಡರ್‌ ಮತ್ತು ವಾರ್ಷಿಕ 2 ಉಚಿತ ಸಿಲಿಂಡರ್‌.

ನುಸುಳುಕೋರರು ಆಕ್ರಮಿಸಿಕೊಂಡಿರುವ ಆದಿವಾಸಿಗಳ ಭೂಮಿಯನ್ನು ಆದಿವಾಸಿಗಳಿಗೆ ಹಿಂದಿರುಗಿಸುವುದಾಗಿ ಪ್ರತಿಜ್ಞೆ.

ಬುಡಕಟ್ಟು ಜನಾಂಗದವರನ್ನು ಮದುವೆಯಾಗುವ ನುಸುಳುಕೋರರ ಮಕ್ಕಳಿಗೆ ಬುಡಕಟ್ಟು ಸ್ಥಾನಮಾನ ರದ್ದು.

ಆದಿವಾಸಿಗಳನ್ನು ಏಕರೂಪ ನಾಗರಿಕ ಸಂಹಿತೆಯ (ಯುಸಿಸಿ) ವ್ಯಾಪ್ತಿಯಿಂದ ಹೊರಗಿಡಲಾಗುವುದು.

ಪ್ರಶ್ನೆ ಪತ್ರಕೆ ಸೋರಿಕೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಂಡು ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವುದಾಗಿ ಭರವಸೆ.

5 ವರ್ಷಗಳಲ್ಲಿ ಯುವಕರಿಗೆ ಸ್ವಯಂ ಉದ್ಯೋಗಕ್ಕಾಗಿ 5 ಲಕ್ಷ ಅವಕಾಶಗಳನ್ನು ಖಾತರಿಪಡಿಸುತ್ತೇವೆ

2,87,500 ಸರ್ಕಾರಿ ಹುದ್ದೆಗಳ ನೇಮಕಾತಿ ಪಾರದರ್ಶಕವಾಗಿ ನಡೆಯಲಿದ್ದು, ಮೊದಲ ಕ್ಯಾಬಿನೆಟ್‌ನಲ್ಲೇ ಪ್ರಕ್ರಿಯೆ ಶುರುವಾಗಲಿದೆ.

2025ರ ನವೆಂಬರ್‌ ಒಳಗೆ 1.5 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲಾಗುವುದು.