Home News Bagalakote : ಪಂಚಮಸಾಲಿ ಪೀಠದಿಂದ ಜಯಮೃತ್ಯುಂಜಯ ಶ್ರೀ ಉಚ್ಛಾಟನೆ ಬಹುತೇಕ ಫಿಕ್ಸ್‌ – ಸ್ವಾಮಿಗಳ ಆರೋಗ್ಯದಲ್ಲಿ...

Bagalakote : ಪಂಚಮಸಾಲಿ ಪೀಠದಿಂದ ಜಯಮೃತ್ಯುಂಜಯ ಶ್ರೀ ಉಚ್ಛಾಟನೆ ಬಹುತೇಕ ಫಿಕ್ಸ್‌ – ಸ್ವಾಮಿಗಳ ಆರೋಗ್ಯದಲ್ಲಿ ಏರುಪೇರು !!

Hindu neighbor gifts plot of land

Hindu neighbour gifts land to Muslim journalist

Bagalakote : ಕಳೆದ ನಾಲ್ಕು ದಿನಗಳಿಂದ ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದಲ್ಲಿರುವ ಪಂಚಮಸಾಲಿ ಮಠಕ್ಕೆ ಬೀಗ ಹಾಕಿರುವ ವಿಚಾರ ರಾಜ್ಯಾದ್ಯಂತ ಸದ್ದು ಮಾಡುತ್ತಿದ್ದೆ. ಈ ಬೆನ್ನಲ್ಲೇ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಟ್ರಸ್ಟ್ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ಮಾತನಾಡಿ ಕೂಡಲಸಂಗಮದ ಪಂಚಮಸಾಲಿ ಮಠದಿಂದ ಬಸವ ಜಯ ಮೃತ್ಯುಂಜಯ ಶ್ರೀಗಳನ್ನು ಹೊರಹಾಕಲು ಚಿಂತನೆ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.

ಹೌದು, ಕೂಡಲಸಂಗಮ ಪಂಚಮಸಾಲಿ ಪೀಠದಿಂದ ಜಯಮೃತ್ಯುಂಜಯ ಶ್ರೀಗಳಿಗೆ ಉಚ್ಛಾಟನೆ ಮಾಡೋದು ಬಹುತೇಕ ಫಿಕ್ಸ್‌ ಆದಂತೆ ಕಾಣುತ್ತಿದೆ. ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಟ್ರಸ್ಟ್ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮಠದಿಂದ ಜಯಮೃತ್ಯುಂಜಯ ಶ್ರೀಗಳನ್ನು ಹೊರಹಾಕಲು ಟ್ರಸ್ಟ್ ಚಿಂತನೆ ನಡೆಸುತ್ತಿದೆ. ಕೂಡಲಸಂಗಮಪೀಠದಲ್ಲಿ ಪರ್ಯಾಯ ವ್ಯವಸ್ಥೆ ಮಾಡಲು ಚಿಂತನೆ ನಡೆಸಲಾಗುತ್ತಿದೆ. ಸ್ವಾಮೀಜಿ ಒಂದು ಪಕ್ಷದ ಬ್ಯಾನರ್ ಅಡಿ ಹೋಗಿ ಕೋರುತ್ತಿದ್ದಾರೆ. ಓರ್ವ ವ್ಯಕ್ತಿಯ ಪರವಾಗಿ ಮಾತ್ರ ಸ್ವಾಮೀಜಿ ಮಾತನಾಡುತ್ತಿದ್ದಾರೆ ಜಯ ಮೃತ್ಯುಂಜಯ ಸ್ವಾಮೀಜಿ ನಡವಳಿಕೆ ಬದಲಾವಣೆ ಆಗಿದ್ದು ಸತ್ಯ ನಮ್ಮ ಸಮಾಜದವರ ಮೇಲೆ ಅನೇಕ ಕಡೆ ದೌರ್ಜನ್ಯ ನಡೆದಿದೆ ಅಲ್ಲಿ ಹೋಗಿ ಸ್ವಾಮೀಜಿಗೆ ಯಾರಿಗೂ ಸ್ವಾಗತ ಹೇಳಿಲ್ಲ ಬಸವ ಜಯಂತಿಯ ಸ್ವಾಮೀಜಿ ಪ್ರಚಾರ ಪ್ರಿಯ ಆಗಿದ್ದಾರೆ ದಿನಾಲು ಮುಂಜಾನೆ ಎದ್ದರೆ ಬರುತ್ತಾರೆ ಎಂದು ಆರೋಪಿಸಿದ್ದಾರೆ.

ಇನ್ನು ಉಚ್ಛಾಟನೆ ಮಾಡೋದು ಬಹುತೇಕ ಫಿಕ್ಸ್‌ಆಗುತ್ತಿದ್ದಂತೆ, ಸ್ವಾಮಿಗಳ ಆರೋಗ್ಯದಲ್ಲಿ ಏರುಪೇರಾಗಿದೆ. ಪಂಚಮಸಾಲಿ ಶ್ರೀಗಳ ಆರೋಗ್ಯದಲ್ಲಿ ಶನಿವಾರ ದಿಢೀರ್ ಏರುಪೇರಾಗಿದೆ. ಬೆಳಿಗಿನ ಜಾವ ಶ್ರೀಗಳಿಗೆ ತೆಲೆನೋವು, ವಾಂತಿ, ಎದೆ ನೋವು ಕಾಣಿಸಿಕೊಂಡಿದೆ. ಇದರಿಂದಾಗಿ ಅವರನ್ನು ಬಾಗಲಕೋಟೆ ಕೆರೂಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತುರ್ತು ನಿಗಾ ಘಟಕದಲ್ಲಿ ಸ್ವಾಮೀಜಿಗೆ ವೈದ್ಯರಿಂದ ಚಿಕಿತ್ಸೆ ನೀಡಲಾಗುತ್ತಿದೆ. ಮಠದಿಂದ ಸ್ವಾಮೀಜಿಯನ್ನ ಭಕ್ತರು ಕರೆದುಕೊಂಡು ಬಂದಿದ್ದಾರೆ. ಕೂಡಲಸಂಗಮ ಪೀಠದಿಂದ ಬಾಗಲಕೋಟೆ ಕೆರೂಡಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಈ ಹಂತದಲ್ಲಿ ಸ್ವಾಮೀಜಿ ನಡೆದುಕೊಂಡೇ ಆಸ್ಪತ್ರೆ ಒಳಗೆ ತೆರಳಿದ್ದಾರೆ.

ಇದನ್ನೂ ಓದಿ: Hindi Language: ಹಿಂದಿ 250 ಭಾಷೆಗಳನ್ನು ನಾಶಪಡಿಸಿದೆ – ಹನುಮಾನ್‌ ಚಾಲೀಸಾ ಕೂಡ ಹಿಂದಿಯಲ್ಲಿ ಇಲ್ಲ: ರಾಜ್ ಠಾಕ್ರೆ