Home latest ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ಘೋಷಿಸಿ, ಇಲ್ಲವಾದ್ರೆ ವಿಧಾನಸೌಧಕ್ಕೆ ಮುತ್ತಿಗೆ : ಜಯಮೃತ್ಯುಂಜಯ ಸ್ವಾಮೀಜಿ...

ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ಘೋಷಿಸಿ, ಇಲ್ಲವಾದ್ರೆ ವಿಧಾನಸೌಧಕ್ಕೆ ಮುತ್ತಿಗೆ : ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ

Hindu neighbor gifts plot of land

Hindu neighbour gifts land to Muslim journalist

2ಎ ಮೀಸಲಾತಿಗಾಗಿ ಆಗ್ರಹಿಸಿ ಪಂಚಮಸಾಲಿ ಸಮುದಾಯ ಮತ್ತೆ ಪಾದಯಾತ್ರೆ ಹೋರಾಟ ಆರಂಭಿಸಿದೆ. ರಾಜ್ಯ ಸರ್ಕಾರ ಕೊಟ್ಟ ಮಾತು ತಪ್ಪಿದ ಹಿನ್ನೆಲೆಯಲ್ಲಿ ಮತ್ತೆ ಪಾದಯಾತ್ರೆ ಆರಂಭಿಸಿದ್ದೇವೆ.ಸುವರ್ಣ ವಿಧಾನಸೌಧ ತಲುಪುವುದರೊಳಗಾಗಿ ಮೀಸಲಾತಿ ಘೋಷಣೆ ಮಾಡಿ ಇಲ್ಲವಾದಲ್ಲಿ ವಿಧಾನಸೌಧ ಮುತ್ತಿಗೆ ಹಾಕುವುದಾಗಿ ಜಯಮೃತ್ಯುಂಜಯ ಸ್ವಾಮೀಜಿ ರಾಜ್ಯ ಸರ್ಕಾರಕ್ಕೆ ಎಚ್ಚರಿಸಿದ್ದಾರೆ.

ಸಿಎಂ ಬಸವರಾಜ್ ಬೊಮ್ಮಾಯಿ ಅವರು ಮೀಸಲಾತಿ ಘೋಷಿಸುವ ಮಾತು ಕೊಟ್ಟಿದ್ದರು. ಆದರೆ ಈಗ ನಾನು ಮಾತುಕೊಟ್ಟಿಲ್ಲ ಎಂದು ಹೇಳಿದ್ದಾರೆ. ಸಿಎಂ ಮಾತು ಕೊಟ್ಟಿದ್ದು ನಿಜ. ಈಗ ಮಾತಿಗೆ ತಪ್ಪಿರುವುದು ಬೇಸರವಾಗಿದೆ. ಮಾಜಿ ಸಿಎಂ ಯಡಿಯೂರಪ್ಪನವರು ಫೆಬ್ರವರಿಯಲ್ಲಿ 2ಎ ಮೀಸಲಾತಿ ಶಿಫಾರಸು ಮಾಡಿದ್ದರು. ಅವರು ಶಿಫಾರಸು ಮಾಡಿ 1 ವರ್ಷ 8 ತಿಂಗಳು ಕಳೆದಿದೆ. ಸರ್ಕಾರ ಮನಸ್ಸು ಮಾಡಿದರೆ 24 ಗಂಟೆಯಲ್ಲಿ ವರದಿ ತರಿಸಿಕೊಳ್ಳಬಹುದು. ಆದರೆ ನೆಪ ಹೇಳುತ್ತಾ ಮೀನಾಮೇಷ ಎಣಿಸುತ್ತಿದ್ದಾರೆ ಎಂದು ಹೇಳಿದ್ದಾರೆ.