Home News JDS : ಎಚ್ ಡಿ ರೇವಣ್ಣಗೆ ಬಿಗ್ ಶಾಕ್ ಕೊಟ್ಟ ಜೆಡಿಎಸ್ !!

JDS : ಎಚ್ ಡಿ ರೇವಣ್ಣಗೆ ಬಿಗ್ ಶಾಕ್ ಕೊಟ್ಟ ಜೆಡಿಎಸ್ !!

Hindu neighbor gifts plot of land

Hindu neighbour gifts land to Muslim journalist

JDS : ನವೆಂಬರ್ 13ರಂದು ರಾಜ್ಯದ ಶಿಗ್ಗಾಂವಿ, ಸಂಡೂರು ಮತ್ತು ಚನ್ನಪಟ್ಟಣ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದೆ. ಈ ಹಿನ್ನೆಲೆ ಭರ್ಜರಿ ಪ್ರಚಾರ ನಡೆಸಲು ಜೆಡಿಎಸ್‌(JDS) ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ. ಈ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೈ ಬಿಡುವ ಮೂಲಕ ಜೆಡಿಎಸ್ ಎಚ್ ಡಿ ರೇವಣ್ಣ((HD Revanna ) ಅವರಿಗೆ ಬಿಗ್ ಶಾಕ್ ನೀಡಿದೆ.

ಹೌದು, 40 ಜನರ ಸ್ಟಾರ್‌ ಪ್ರಚಾರಕ ಪಟ್ಟಿಯನ್ನು ಕೇಂದ್ರ ಸಚಿವರು ಜೆಡಿಎಸ್‌ ರಾಜ್ಯಾಧ್ಯಕ್ಷರೂ ಆದ ಹೆಚ್‌.ಡಿ ಕುಮಾರಸ್ವಾಮಿ ಬಿಡುಗಡೆ ಮಾಡಿದ್ದು, ಚುನಾವಣಾ ಆಯೋಗಕ್ಕೂ ಪಟ್ಟಿಯನ್ನ ರವಾನೆ ಮಾಡಿದ್ದಾರೆ. ಆದ್ರೆ ಜೆಡಿಎಸ್ ನ ಪ್ರಮುಖ ನಾಯಕರಿಗೆ ಸ್ಥಾನ ನೀಡಿರುವ ಜೆಡಿಎಸ್ ಜಿ. ಟಿ ದೇವೇಗೌಡ(G T Devegowda ) ಹಾಗೂ ಹೆಚ್.ಡಿ ರೇವಣ್ಣರನ್ನು ಪಟ್ಟಿಯಿಂದ ಕೈ ಬಿಡಲಾಗಿದೆ. ಈ ಮೂಲಕ ಜೆಡಿಎಸ್ ನ ಇಬ್ಬರು ವರಿಷ್ಠರಿಗೆ ಪಕ್ಷವು ಕೋಕ್ ನೀಡಿದೆ.

ಅಂದಹಾಗೆ ಜೆಡಿಎಸ್ ಸ್ಟಾರ್ ಕ್ಯಾಂಪೇನರ್ಗಳ ಪಟ್ಟಿಯಲ್ಲಿ ಶಾಸಕರು, ಮಾಜಿ ಶಾಸಕರು, ಮಾಜಿ, ಹಾಲಿ ಸಂಸದರು, ಹಿರಿಯ ಶಾಸಕರು ಸೇರಿ ಒಟ್ಟು 40 ಪ್ರಚಾರಕರು ಹೆಸರು ಇದೆ. ಇತ್ತೀಚೆಗೆ ಮುಡಾ ಪ್ರಕರಣದಲ್ಲಿ ಸಿಎಂ ರಾಜೀನಾಮೆ ನೀಡಬೇಕೆಂಬ ಒತ್ತಾಯದ ವಿಚಾರಕ್ಕೆ ಸಂಬಂಧಿಸಿದಂತೆ ಜಿ.ಟಿ ದೇವೇಗೌಡರು ದಸರಾ ಉದ್ಘಾಟನಾ ವೇದಿಕೆಯಲ್ಲಿ ಮಾತನಾಡಿದ್ದರು. ಕುಮಾರಸ್ವಾಮಿ ವಿರುದ್ಧವೇ ವಾಗ್ದಾಳಿ ನಡೆಸಿದ್ದ ಜಿಟಿ ದೇವೇಗೌಡ ಅವರು ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಉಪಚುನಾವಣೆಗೆ ಸ್ಟಾರ್ ಪ್ರಚಾರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.