Home News ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ ಭಾರತೀಯ ಗಡಿ ಭದ್ರತಾ ಪಡೆ(ಬಿ.ಎಸ್.ಎಫ್)ನಲ್ಲಿ ಹಲವು ಹುದ್ದೆ!

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ ಭಾರತೀಯ ಗಡಿ ಭದ್ರತಾ ಪಡೆ(ಬಿ.ಎಸ್.ಎಫ್)ನಲ್ಲಿ ಹಲವು ಹುದ್ದೆ!

Hindu neighbor gifts plot of land

Hindu neighbour gifts land to Muslim journalist

ಗಡಿ ಭದ್ರತಾ ಪಡೆ (BSF) ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು,ಒಟ್ಟು 72 ‘C’ ಗ್ರೂಪ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಬಿಎಸ್​ಎಫ್​ನ ಅಧಿಕೃತ ವೆಬ್​ಸೈಟ್​​ನಲ್ಲಿ ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಗೃಹ ಸಚಿವಾಲಯದ ಗಡಿ ಭದ್ರತಾ ಪಡೆಯ ಎಂಜಿನಿಯರಿಂಗ್‌ ವಿಭಾಗದಲ್ಲಿ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

ಕಾನ್ಸ್ಟೇಬಲ್, ಹೆಡ್ ಕಾನ್ಸ್ಟೇಬಲ್ ಹಾಗೂ ಎ.ಎಸ್. ಐ ಹುದ್ದೆಗಳು ಖಾಲಿ ಇದ್ದು ಉದ್ಯೋಗ ಆಕಾಂಕ್ಷಿ ಅರ್ಹ ಅಭ್ಯರ್ಥಿಗಳು ಪ್ರಯತ್ನಸಬಹುದಾಗಿದೆ.

ವಿದ್ಯಾರ್ಹತೆ:

ಅಧಿಸೂಚನೆಯ ಪ್ರಕಾರ, ಮಾನ್ಯತೆ ಪಡೆದ ಮಂಡಳಿಯಿಂದ 10 ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳು ಕಾನ್ಸ್‌ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಅವರು ಸಂಬಂಧಿತ ಟ್ರೇಡ್​​​ನಲ್ಲಿ ಐಟಿಐ ಪ್ರಮಾಣಪತ್ರವನ್ನು ಸಹ ಹೊಂದಿರಬೇಕು.

ವಯೋಮಿತಿ:

ಬಿಎಸ್‌ಎಫ್‌ನಲ್ಲಿ ಗ್ರೇಡ್ ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವಯೋಮಿತಿಯನ್ನು 18 ರಿಂದ 25 ವರ್ಷಗಳ ನಡುವೆ ನಿಗದಿಪಡಿಸಲಾಗಿದೆ. ಮೀಸಲಾತಿ ಇರುವ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್ಸೈಟ್ :rectt.bsf.gov.in ಗೆ ಭೇಟಿಕೊಡಿ