ಸೋಮವಾರ, 26 ಅಕ್ಟೋಬರ್ 2026
Trending

ಕೋಲ್ಪೆಯಲ್ಲಿ ಕಾರ್ ತಡೆದು ಯುವತಿ ಕುಟುಂಬದ ಮೇಲೆ ಹಲ್ಲೆ? 9 ಮಂದಿಗೆ FIR

ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಕಡಬ ತಾಲೂಕಿನ ಕೋಲ್ಪೆಯಲ್ಲಿ ಆಗಸ್ಟ್ 12ರ ರಾತ್ರಿ ಯುವತಿ ಹಾಗೂ ಆಕೆಯ ಕುಟುಂಬಸ್ಥರ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ ಎಂಬ ಆರೋಪ ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ 9 ಮಂದಿ ವಿರುದ್ಧ FIR ದಾಖಲಾಗಿದೆ.

Sponsored

ಪಿಯುಸಿ ವಿದ್ಯಾರ್ಥಿಗಳಿಗೂ ಉಚಿತ ಪಠ್ಯಪುಸ್ತಕ; ಗುಣಮಟ್ಟದಲ್ಲಿ ಲೋಪವಾದರೆ ಕ್ರಮ:ಮಧು ಬಂಗಾರಪ್ಪ

ಮೆಲ್ಕಾರ್‌ನಲ್ಲಿ ಕೆಲಸ ಮಾಡುತ್ತಿದ್ದ 18 ವರ್ಷದ ಯುವತಿ, ಕೆಲಸ ಮುಗಿಸಿಕೊಂಡು ತಾಯಿ ಹಾಗೂ ಪರಿಚಿತರೊಂದಿಗೆ ಕಾರಿನಲ್ಲಿ ಮನೆಗೆ ತೆರಳುತ್ತಿದ್ದರು. ರಾತ್ರಿ ಸುಮಾರು 11 ಗಂಟೆ ವೇಳೆಗೆ ಕೋಲ್ಪೆ ಬಳಿ ಕೆಲವರು ಕಾರು ಮತ್ತು ಬೈಕ್‌ಗಳಲ್ಲಿ ಬಂದು ವಾಹನವನ್ನು ಅಡ್ಡಗಟ್ಟಿ ಗಲಾಟೆ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಘಟನೆ ತಿಳಿದು ಸ್ಥಳಕ್ಕೆ ಬಂದ ಕುಟುಂಬಸ್ಥರ ಮೇಲೂ ಹಲ್ಲೆ ನಡೆದಿದೆ ಎನ್ನಲಾಗಿದೆ. ಯುವತಿಯ ಕಪಾಳಕ್ಕೆ ಹೊಡೆದು ಬೆದರಿಕೆ ಹಾಕಲಾಗಿದ್ದು, ಜಗಳ ಬಿಡಿಸಲು ಮುಂದಾದವರ ಮೇಲೂ ದಾಳಿ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.ಇದಲ್ಲದೆ, ಪ್ರಜ್ಞೆ ತಪ್ಪಿ ಬಿದ್ದಿದ್ದ ಅಕ್ಕನನ್ನು ಮೇಲಕ್ಕೆತ್ತಲು ಬಂದ ಸಹೋದರಿಯ ಮೇಲೂ ಹಲ್ಲೆ ನಡೆಸಲಾಗಿದೆ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡವರು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುವ ಸಂದರ್ಭದಲ್ಲಿ ಯುವತಿ ವಿಡಿಯೋ ಮೂಲಕ ಘಟನೆಯ ಕುರಿತು ಆರೋಪಗಳನ್ನು ಮಾಡಿದ್ದಾರೆ.

ಪಿಯುಸಿ ವಿದ್ಯಾರ್ಥಿಗಳಿಗೂ ಉಚಿತ ಪಠ್ಯಪುಸ್ತಕ; ಗುಣಮಟ್ಟದಲ್ಲಿ ಲೋಪವಾದರೆ ಕ್ರಮ:ಮಧು ಬಂಗಾರಪ್ಪ

ರಾತ್ರಿ ತಡವಾಗಿದ್ದ ಕಾರಣ ಕಾರಿನಲ್ಲಿ ಪ್ರಯಾಣಿಸುತ್ತಿದ್ದೆವು. ಈ ವೇಳೆ ತಮ್ಮ ಹಾಗೂ ಸಹೋದರಿಯ ಮೇಲೆ ತೀವ್ರವಾಗಿ ಹಲ್ಲೆ ನಡೆಸಲಾಗಿದ್ದು, ಕುಟುಂಬಸ್ಥರನ್ನೂ ಗುರಿಯಾಗಿಸಿ ದಾಳಿ ಮಾಡಲಾಗಿದೆ ಎಂದು ಯುವತಿ ಆರೋಪಿಸಿದ್ದಾರೆ. ಆರೋಪಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಿ ಅಮಾನುಷವಾಗಿ ವರ್ತಿಸಿದ್ದಾರೆ ಎಂದೂ ಅವರು ತಿಳಿಸಿದ್ದಾರೆ.
ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಜಾಬಿರ್, ಸಿದ್ದಿಕ್, ಉನೈಸ್, ರಂಶಿಕ್, ಸಂಶುದ್ದೀನ್, ಜಾಫರ್, ಆಶಿತ್, ಆಚೂರು ಅಲಿಯಾಸ್ ಅಶ್ರಫ್ ಹಾಗೂ ಅಶ್ರಫ್ ಕೋಲ್ಪೆ ವಿರುದ್ಧ BNSನ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಾಗಿದೆ. ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.