

ಕಳೆದ ಸುಮಾರು ನಾಲ್ಕೂವರೆ ವರ್ಷಗಳಿಂದ ಕಡಬ ಪೊಲೀಸ್ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಜನಸ್ನೇಹಿ ಪೊಲೀಸ್ ಭವಿತ್ ರೈ ಹೆಡ್ ಕಾನ್ಸ್ಟೇಬಲ್ ಆಗಿ ಸೇವೆಯಲ್ಲಿ ಮುಂಭಡ್ತಿ ಹೊಂದಿದ್ದಾರೆ.
ಠಾಣಾ ವ್ಯಾಪ್ತಿಯ ಅಪರಾಧ ಪ್ರಕರಣಗಳನ್ನು ತಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ ಭವಿತ್ ರೈ ಅವರು ಕಡಬ ಠಾಣೆಗೆ ಆಗಮಿಸುವ ಮೊದಲು 5 ವರ್ಷಗಳ ಕಾಲ ವಿಟ್ಲ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು.
ಸದ್ಯ ಹೆಡ್ ಕಾನ್ಸ್ಟೇಬಲ್ ಆಗಿ ಭಡ್ತಿ ಪಡೆದಿದ್ದು, ಕಡಬ ಠಾಣೆಯಲ್ಲೇ ಕರ್ತವ್ಯ ಮುಂದುವರಿಯಲಿದೆ ಎಂದು ತಿಳಿದುಬಂದಿದೆ.













