Home News ಕಡಬ: ಪತ್ನಿಯೊಂದಿಗೆ ಸ್ನೇಹಿತ ಸಂಪರ್ಕ: ಗ್ಯಾರೇಜ್‌ ಮಾಲೀಕ ಸಾವು

ಕಡಬ: ಪತ್ನಿಯೊಂದಿಗೆ ಸ್ನೇಹಿತ ಸಂಪರ್ಕ: ಗ್ಯಾರೇಜ್‌ ಮಾಲೀಕ ಸಾವು

Image Credit: Zoom

Hindu neighbor gifts plot of land

Hindu neighbour gifts land to Muslim journalist

ಕಡಬ: ಕುಟ್ರುಪ್ಪಾಡಿ ನಿವಾಸಿ ಸೊಲೊಮೊನ್‌ (54) ಅವರು ನೀಡಿದ ದೂರಿನ ಮೇರೆಗೆ, ಅವರ ಪುತ್ರ ರಾಕೇಶ್‌ (36) ಅವರ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಡಬ ಪೊಲೀಸ್‌ ಠಾಣೆಯಲ್ಲಿ ಯುಡಿಆರ್‌ ಪ್ರಕರಣ ದಾಖಲಾಗಿದೆ. ಈ ಕುರಿತು ತನಿಖೆ ನಡೆಯುತ್ತಿದೆ.

ರಾಕೇಶ್‌ ಅವರು ಕಡಬದ ಕಳಾರದಲ್ಲಿ ದ್ವಿಚಕ್ರ ವಾಹನ ಗ್ಯಾರೇಜ್‌ ನಡೆಸುತ್ತಿದ್ದು, ತನ್ನ ಪತ್ನಿ ಹಾಗೂ ಸ್ನೇಹಿತರ ನಡುವೆ ಮೊಬೈಲ್‌ ಸಂಪರ್ಕವಿರುವ ವಿಚಾರ ತಿಳಿದು ತೀವ್ರ ನೊಂದುಕೊಂಡಿದ್ದು ದಿ.19-11-2025 ರಂದು ಸಂಜೆ ಕಡಬ ಬಜಾಜ್‌ ಶೋ ರೂಂ ಹಿಂಭಾಗದಲ್ಲಿ ಆತ್ಮಹತ್ಯೆ ಯತ್ನಿಸಿದ್ದ ಎಂದು ದೂರಿನಲ್ಲಿ ಉಲ್ಲೇಖ ಮಾಡಲಾಗಿರುವ ಕುರಿತು ವರದಿಯಾಗಿದೆ.

ಕೂಡಲೇ ಸ್ಥಳೀಯರು ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದು, ನಂತರ ಹೆಚ್ಚಿನ ಚಿಕಿತ್ಸೆಗೆಂದು ಮಂಗಳೂರಿನ ಫಾದರ್‌ ಮುಲ್ಲರ್‌ ಆಸ್ಪತ್ರೆಗೆ ಸೊಲೊಮೊನ್‌ ಅವರ ಇನ್ನೊಬ್ಬ ಪುತ್ರ ರಾಜೇಶ್‌ ಅವರು ದಾಖಲು ಮಾಡಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ದಿ.26-11-2025 ರಂದು ರಾಕೇಶ್‌ ಮೃತ ಹೊಂದಿರುವುದಾಗಿ ಆಸ್ಪತ್ರೆ ವೈದ್ಯರು ತಿಳಿಸಿರುವುದಾಗಿ ವರದಿಯಾಗಿದೆ.

ಕಡಬ ಪೊಲೀಸ್‌ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲು ಮಾಡಿಕೊಂಡಿದ್ದು, ಮುಂದಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.