ಕಡಬ : ಎಸ್.ಡಿ.ಪಿ.ಐ ಮತ್ತು ಪಿ.ಎಫ್.ಐ ಸಂಘಟನೆಯನ್ನು ನಿಷೇಧಿಸಲು ಮನವಿ
ಕಡಬ : ವಿಶ್ವ ಹಿಂದೂ ಪರಿಷತ್ ಬಜರಂಗದಳ ಕಡಬ ಪ್ರಖಂಡ, ಹಿಂದೂ ಜಾಗರಣ ವೇದಿಕೆ ಕಡಬ ತಾಲೂಕು ಮತ್ತು ಭಾರತೀಯ ಜನತಾ ಪಾರ್ಟಿ ಕಡಬ ಇದರ ನೇತೃತ್ವದಲ್ಲಿ
ಎಸ್ ಡಿ ಪಿ ಐ ಮತ್ತು ಪಿ ಫ್ ಐ ಸಂಘಟನೆಯನ್ನು ನಿಷೇಧಿಸಲು ಮತ್ತು ಕಬಕದಲ್ಲಿ ಸ್ವಾತಂತ್ರ್ಯ ದಿನ ರಥಯಾತ್ರೆಯನ್ನು ತಡೆದು ನಿಲ್ಲಿಸಿ ಬಂಧಿತರಾಗಿರುವ ಎಸ್ ಡಿ ಪಿಐ ಕಾರ್ಯಕರ್ತರ ಮೇಲೆ ದೇಶದ್ರೋಹ ಕೇಸು ದಾಖಲಿ ಸುವಂತೆ ಒತ್ತಾಯಿಸಿ ಕಡಬ ಪೊಲೀಸ್ ಠಾಣೆಯಲ್ಲಿ ಮನವಿ ಸಲ್ಲಿಸಲಾಯಿತು.
Sponsoredಈ ಸಂದರ್ಭದಲ್ಲಿ ವಿಶ್ವ ಹಿಂದೂ ಕಡಬ ಪ್ರಖಂಡ ಅಧ್ಯಕ್ಷರಾದ ರಾಧಾಕೃಷ್ಣ ಕೋಲ್ಪೆ , ಹಿಂದೂ ಜಾಗರಣ ವೇದಿಕೆ ಪ್ರಾಂತ ಸಂಪರ್ಕ ಪ್ರಮುಖ್ ರವಿರಾಜ್ ಶೆಟ್ಟಿ ಕಡಬ , ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಉಪಾಧ್ಯಕ್ಷರಾದ ಪ್ರಕಾಶ್ ಎನ್ .ಕೆ ಹಾಗೂ ಕಾರ್ಯಕರ್ತರು ಉಪಸ್ಥಿರಿದ್ದರು.




